Breaking News

ಮಾಸ್ಕ್ ಧರಿಸದ್ದಕ್ಕೆ ದಂಡ ವಿಧಿಸಿದ ಅಧಿಕಾರಿಗೆ ಹಿಗ್ಗಾಮುಗ್ಗ ಥಳಿಸಿದ ಮಹಿಳೆ; ವಿಡಿಯೋ ವೈರಲ್

Spread the love

ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮಹಿಳೆಯೊಬ್ಬರಿಗೆ ದಂಡ ವಿಧಿಸಿದ ಅಧಿಕಾರಿಯೇ ಆಕೆಯಿಂದ ಒದೆ ತಿಂದಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಕೊವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಿಲ್ಲ ಎಂದು ದಂಡ ವಿಧಿಸಿದ್ದಕ್ಕೆ ಆ ಅಧಿಕಾರಿಯ ಕೆನ್ನೆಗೆ ಹೊಡೆದು, ಕಾಲಿನಲ್ಲಿ ಒದ್ದು, ಆತನ ಕೂದಲನ್ನು ಹಿಡಿದು ಎಳೆದಾಡಿರುವ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಂಬಂಧ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

ನವದೆಹಲಿಯಲ್ಲಿ ನಡೆದ ಈ ಘಟನೆಯ ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ದೆಹಲಿಯ ಪೀರಾಗಢಿ ಮೆಟ್ರೋ ಸ್ಟೇಷನ್ ಬಳಿ ಈ ಘಟನೆ ನಡೆದಿದೆ. ಮೆಟ್ರೋದಲ್ಲಿ ಸಂಚರಿಸಲು ಸ್ಟೇಷನ್ ಒಳಗೆ ಹೋಗುತ್ತಿದ್ದ ಇಬ್ಬರು ಮಹಿಳೆಯರು ಮಾಸ್ಕ್ ಧರಿಸಿರಲಿಲ್ಲ. ದೆಹಲಿಯಲ್ಲಿ ಕೊವಿಡ್ ಕೇಸುಗಳು ಹೆಚ್ಚಾಗಿರುವುದರಿಂದ ಕೊರೊನಾ ನಿಯಮ ಪಾಲನೆ ಮಾಡದವರಿಗೆ ದಂಡ ವಿಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ, ಮಾಸ್ಕ್ ಧರಿಸದ ಆ ಮಹಿಳೆಯರಿಬ್ಬರಿಗೆ ಅಲ್ಲಿದ್ದ ಅಧಿಕಾರಿ ದಂಡ ವಿಧಿಸಿ, ಚಲನ್ ನೀಡಿದ್ದಾರೆ. ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಮಹಿಳೆಯರು ಆ ಅಧಿಕಾರಿಯ ಜೊತೆ ಜಗಳವಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಅವರಲ್ಲೊಬ್ಬ ಮಹಿಳೆ ಅಧಿಕಾರಿಯ ಕೂದಲನ್ನು ಹಿಡಿದು ಎಳೆದಾಡಿ, ಹೊಡೆದು, ಕಾಲಿನಿಂದ ಒದ್ದು ಗಲಾಟೆ ಮಾಡಿದ್ದಾರೆ. ಇದ್ದಕ್ಕಿದ್ದಂತೆ ತನ್ನ ಮೇಲೆ ಹಲ್ಲೆ ಮಾಡಿದ್ದರಿಂದ ಆ ಅಧಿಕಾರಿಯೂ ಕಂಗಾಲಾಗಿದ್ದಾರೆ. ಅಲ್ಲಿದ್ದ ಜನರು ಈ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

 

 


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ