Breaking News

ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆಗೆ 1 ವರ್ಷ; ಇನ್ನೂ ನನಗೆ ನ್ಯಾಯ ಸಿಕ್ಕಿಲ್ಲಾ ಎಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ

Spread the love

ಬೆಂಗಳೂರು: ಒಂದು ವರ್ಷದ ಹಿಂದೆ ಇಡೀ ಬೆಂಗಳೂರಿಗೆ ಬೆಂಗಳೂರೆ ಬೆಚ್ಚಿ ಬೀಳುವಂತ ಘಟನೆ ನಡೆದಿತ್ತು. ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣ(DJ Halli and KG Halli Violence) ಜನರ ನಿದ್ದೆ ಕೆಡಿಸಿತ್ತು. ಒಂದು ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅನಾಹುತ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ(Akhanda Srinivas Murthy) ಮನೆ ಬೆಂಕಿಗೆ ಆಹುತಿಯಾಗಿತ್ತು. ಸದ್ಯ ಇಂದು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ.

ಈ ಬಗ್ಗೆ ಡಿಜೆ ಹಳ್ಳಿಯಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮಾತನಾಡಿದ್ದಾರೆ. ಇಂದಿಗೆ ನಮ್ಮ ಮನಗೆ ಹಾಗೂ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಒಂದು ವರ್ಷ ಅಗಿದೆ. ನಡೆಯಬಾರದ ಘಟನೆ ನಡೆದು ಹೋಗಿತ್ತು. ಅಂದಿನ ಈ ವಿಚಾರಕ್ಕೆ ನೋವಿದೆ. ಘಟನೆ ಸಂಬಂಧಪಟ್ಟಂತೆ ಪ್ರಮುಖ ಅರೋಪಿಗಳ ವಿಚಾರದಲ್ಲಿ ಕಾನೂನು ಮೂಲಕ ನ್ಯಾಯ ಸಿಕ್ಕಿದೆ. ಇನ್ನು ಸಂಪೂರ್ಣ ನ್ಯಾಯಾಕ್ಕಾಗಿ ಹೋರಾಟ ಮಾಡ್ತಿದ್ದೇವೆ. ಅದ್ರೆ ನಮ್ಮ ಪಕ್ಷದಿಂದ ಇದುವರೆಗೂ ನ್ಯಾಯಾ ಸಿಕ್ಕಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ರಿಗೆ ಮನವಿ ಮಾಡಲಾಗಿದೆ. ಸಂಪತ್ ರಾಜ್ರಂತವರನ್ನು ಪಕ್ಷದಲ್ಲಿ ಇಟ್ಟುಕೊಳ್ಳಬೇಡಿ. ಸಂಪತ್ ರಾಜ್ ಪಕ್ಷದಿಂದ ಸಸ್ಪೆಂಡ್ ಮಾಡುವಂತೆ ಸಹ ಮನವಿ ಮಾಡಿದ್ದೇವೆ.

ಸುಪ್ರೀಂ ಕೋರ್ಟ್ನಲ್ಲಿ ಪ್ರಮುಖ ಅರೋಪಿಗಳಾದ ಸಂಪತ್ ರಾಜ್, ಜಾಕಿರ್, ಯಾಸಿನ್, ಅರೂಣ್ ರಾಜ್, ಗೆ ಸಿಕ್ಕಿರುವ ಬೇಲ್ ಕ್ಯಾನ್ಸಲ್ ಮಾಡಿಸಲು ಅರ್ಜೆ ಹಾಕಲಾಗಿದೆ. ಇದೇ ತಿಂಗಳ 23 ಕ್ಕೆ ಸುಪ್ರೀಂ ನಲ್ಲಿ ವಿಚಾರಣೆಗೆ ಬರುತ್ತೆ. ಇನ್ನೂ ನನಗೆ ಸಂಪೂರ್ಣ ನ್ಯಾಯಾ ಸಿಕ್ಕಿಲ್ಲಾ. ಪಕ್ಷದಿಂದ ನ್ಯಾಯಾ ಸಿಗಬೇಕಿದೆ ಎಂದರು.

ಘಟನೆಯ ಹಿನ್ನೆಲೆ
‘ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಲಾಗಿದೆ’ ಎಂದು ಆರೋಪಿಸಿ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ 2020ರ ಆಗಸ್ಟ್​ 10ರಂದು ವಾಹನಗಳಿಗೆ ಬೆಂಕಿಹಚ್ಚಿ, ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆಯೂ ಕೆಲವರು ದಾಳಿ ಮಾಡಿದ್ದರು.

ಪೊಲೀಸರ ಗುಂಡೇಟಿಗೆ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದರು. ಅವಹೇಳನಕಾರಿ ಪೋಸ್ಟ್ ಹಾಕಿದ್ದ ಎನ್ನಲಾದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಘಟನೆಗೆ ಸಂಬಂಧಿಸಿದಂತೆ 111 ಜನರನ್ನು ಪೊಲೀಸರು ಬಂಧಿಸಿದ್ದರು. ಹಿಂಸಾಚಾರದಲ್ಲಿ 500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ