Breaking News

ಸರ್ಕಾರದ ಹೂ ನಿಷೇಧ ಆದೇಶಕ್ಕೆ ಹೂ ಮಾರಾಟಗಾರರ ಪ್ರತಿಭಟನೆ

Spread the love

ಬೆಂಗಳೂರು, – ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ನಾಳೆ (ಗುರುವಾರ) ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.

ರಾಜ್ಯ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶ ರಾಜ್ಯದ ಹೂ ಬೆಳೆಗಾರರು ಹಾಗೂ ರೈತರ ಮೇಲೆ ಗಧಾಪ್ರಹಾರ ವಾಗಿದೆ.ಬೆಂಗಳೂರಿನ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆಯ ಎದುರು ನಾಳೆ ಬೆಳಿಗ್ಗೆ 11.15 ಕ್ಕೆ ರಾಜ್ಯದ ಹೂ ಬೆಳೆಗಾರರು ಹಾಗೂ ರೈತರ ಮತ್ತು ಮಾರಾಟಗಾರರ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ