ದಾವಣಗೆರೆ: ಪ್ರೀತಿಸಿದ ಯುವತಿ ತನ್ನ ಜೊತೆ ಮದುವೆಯಾಗುವುದನ್ನು ನಿರಾಕರಿಸಿದ್ದಕ್ಕೆ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ.


ಕೆಲ ದಿನಗಳಿಂದ ಯುವತಿ ಮದುವೆಗೆ ನಿರಾಕರಿಸಿದ್ದು, ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿದೆ ಎಂದು ತಿಳಿದುಬಂದಿದೆ. ಇದರಿಂದ ಮಾನಸಿಕವಾಗಿ ಕುಗ್ಗಿದ ಮಹಾಂತೇಶ್, ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ‘ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿಯೇ ಕಾರಣ’, ಅಕ್ಕ ನಿಮ್ಮನ್ನು ಬಿಟ್ಟು ಹೋಗುತ್ತಿದ್ದೇನೆ ಕ್ಷಮಿಸಿ ಎಂದು ವಾಟ್ಸಪ್ ನಲ್ಲಿ ಸ್ಟೇಟಸ್‍ಗೆ ಹಾಕಿ, ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7