Breaking News

ಬೆಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪರನ್ನು ಭೇಟಿಯಾದ ಆನಂದ್ ಸಿಂಗ್ ಹಾಗೂ ಶಾಸಕ ರಾಜೂಗೌಡ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹಂಚಿಕೆ ಮಾಡಿರುವ ಖಾತೆಯ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್ ಸಿಂಗ್ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ, ಬಿಎಸ್ವೈ ಭೇಟಿ ನಂತರ ಯಾವುದೇ ಪ್ರತಿಕ್ರಿಯೆ ನೀಡದೆ ಆನಂದ್ ಸಿಂಗ್ ತೆರಳಿದ್ದಾರೆ. ಈ ಮಧ್ಯೆ ಯಡಿಯೂರಪ್ಪ ಆಪ್ತ ರಾಜೂಗೌಡ ಅವರು ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಅವರನ್ನು ಬೆಂಗಳೂರಿಗೆ ಕರೆತರಲು ಯಶಸ್ವಿ ಆಗಿದ್ದಾರೆ.

ಆದರೆ ಆನಂದ್ ಸಿಂಗ್ ನೇರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡದೆ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ್ದಾರೆ. ಆನಂದ್ ಸಿಂಗ್ ಗೆ ಶಾಸಕ ರಾಜೂಗೌಡ ಸಾಥ್ ನೀಡಿದ್ದು, ಒಂದೇ ಕಾರಿನಲ್ಲಿ ಆನಂದ್ ಸಿಂಗ್ ಹಾಗೂ ರಾಜುಗೌಡ ಆಗಮಿಸಿದ್ದಾರೆ. ಸದ್ಯದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಇರುವ ಖಾತೆಯಲ್ಲಿ ಮುಂದುವರಿಯಿರಿ. ಈ ಸ್ಥಿತಿಯಲ್ಲಿ ಖಾತೆ ಬದಲಾವಣೆಗೆ ಪಟ್ಟು ಹಿಡಿದಲ್ಲಿ ಮತ್ತಷ್ಟು ಗೊಂದಲ ಸೃಷ್ಟಿಗೆ ಕಾರಣವಾಗುತ್ತದೆ. ಪ್ರವಾಸೋದ್ಯಮ ಖಾತೆ ಉತ್ತಮವಾಗಿದ್ದು, ಅದರಲ್ಲಿ ಮುಂದುವರಿಯಿರಿ ಎಂದು ಮನವೊಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ