Breaking News

ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶ

Spread the love

ವಿಜಯಪುರ: ಸಾರ್ವಜನಿಕ ಗಣೇಶೋತ್ಸವ ನಿಷೇಧಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿ ಬ್ಯಾನ್ ಮಾಡಿದ್ದರೆ ಓಕೆ. ಆದರೆ ಈ ಬ್ಯಾನ್ ಕೇವಲ ಗಣೇಶ ಚತುರ್ಥಿಗಷ್ಟೇ ಸೀಮಿತವಾದ್ರೆ ಸರಿಯಲ್ಲ. ಅದನ್ನ ನಾನು ವಿರೋಧ ಮಾಡ್ತೇನೆ ಎಂದು  ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ 3 ನೇ ಅಲೆ ಪಕ್ಕಾ ಇದೆ ಅಂತಾ ವರದಿ ಇದೆ. ನಾವು ಜನರ ಪ್ರಾಣದ ಜೊತೆ ಚಲ್ಲಾಟ ಆಡುವುದು ಬೇಡ. ಆದರೆ ಮುಂದೆ ಯಾವುದೇ ಮೊಹರಂ ಬರಲಿ, ಸುಡಗಾಡ ಇರಲಿ ಎಲ್ಲದಕ್ಕೂ ಇಂತಹ ಬ್ಯಾನ್ ಆಗಬೇಕು. ಅವರಿಗೊಂದು ಕಾನೂನು, ನಮಗೊಂದು ಕಾನೂನು ಬೊಮ್ಮಾಯಿ ಸರ್ಕಾರದಲ್ಲಿ ನಡೆಯುವುದಿಲ್ಲ. ಒಂದು ವೇಳೆ ವ್ಯತ್ಯಾಸ ಆದರೆ ಅದನ್ನ ಉಲ್ಲಂಘನೆ ಮಾಡಲು ನಾವು ಸಿದ್ಧರಿದ್ದೇವೆ ಎಂದು ಯತ್ನಾಳ್ ವಾರ್ನ್ ಮಾಡಿದ್ದಾರೆ.


Spread the love

About Laxminews 24x7

Check Also

ಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ 10 ಕೋಟಿ ರೂಪಾಯಿ ಮೀಸಲು- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the loveಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ 10 ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ