Breaking News

ಅವಾಚ್ಯ ಪದ ಬಳಕೆ ಮಾಡಿದ್ದು ಬಿ ಕೆ ಹರಿ ಪ್ರಸಾದ್‌ ವಿರುದ್ದ ಮಾತ್ರ ಎಂದ ಈಶ್ವರಪ್ಪ

Spread the love

ಶಿವಮೊಗ್ಗ: ಪ್ರಪಂಚದಲ್ಲಿ ಜನಾನುರಾಗಿ ನಾಯಕರಲ್ಲಿ ಪ್ರಧಾನಿ ಮೋದಿ ಸಹ ಒಬ್ಬರು. ಪ್ರಪಂಚವೇ ಮೋದಿ ಅವರನ್ನ ಒಪ್ಪಿಕೊಳ್ಳುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸುಲಭ್ ಶೌಚಾಲಯಕ್ಕೆ ಮೋದಿ ಹೆಸರಿಡಿ ಎಂದು ಹೇಳುತ್ತಾರೆ. ಹೀಗಾಗಿಯೇ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದು. ಈಡೀ ಕಾಂಗ್ರೆಸ್ ನಾಯಕರ ವಿರುದ್ಧ ಬಳಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದರು.

ನಗರದಲ್ಲಿ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೇಶದ ಗೌರವಾನ್ವಿತ ಪ್ರಧಾನಿ ವಿರುದ್ಧ ಅಸಭ್ಯ ಪದ ಬಳಕೆ ಮಾಡಿದರೆ ನಮಗೆ ಸಿಟ್ಟು ಬರುವುದಿಲ್ಲವಾ? ಹೀಗಾಗಿಯೇ ಆ ಸಂದರ್ಭದಲ್ಲಿ ನಾನು ಮಾತನಾಡಿದ್ದು ನಿಜ. ತಕ್ಷಣವೇ ನನ್ನ ಮಾತು ನನಗೆ ಅರಿವಾಗಿ, ಆ ಪದವನ್ನು ಹಿಂಪಡೆದು, ಕ್ಷಮೆ ಕೇಳಿದ್ದೇನೆ ಎಂದರು.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ