Breaking News

ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿದ ತಮಿಳುನಾಡು ಸರ್ಕಾರ; ಕರ್ನಾಟಕದಲ್ಲಿ ಯಾವಾಗ?; ಸಿದ್ದರಾಮಯ್ಯ ಪ್ರಶ್ನೆ

Spread the love

ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಪ್ರತಿ ಲೀಟರೆ ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿ ಆದೇಶಿಸಿದ್ದು, ತಮಿಳುನಾಡು ಸರ್ಕಾರ ಈ ನಿರ್ಧಾರವನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ ಯಾವಾಗ ಎಂದು ಶುಕ್ರವಾರ ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪೆಟ್ರೋಲ್ ಮೇಲಿನ ಸುಂಕವನ್ನು ರೂ.3 ಇಳಿಸಿ ತಮಿಳುನಾಡು ಸರ್ಕಾರ ಲಕ್ಷಾಂತರ ಜನರಿಗೆ ಸಹಾಯ ಮಾಡಿದೆ. ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತಮಿಳುನಾಡು ಸರ್ಕಾರದಂತೆಯೇ ನಮ್ಮ ರಾಜ್ಯದಲ್ಲೂ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ರೂ.3 ಇಳಿಕೆ ಮಾಡುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ಬರೆದುಕೊಂಡಿದ್ದಾರೆ.

ನಿನ್ನೆಯಷ್ಟೇ ತಮಿಳುನಾಡು ಹಣಕಾಸು ಮತ್ತು ಮಾನವ ಸಂಪನ್ಮೂಲ ಸಚಿವ ಪಳನಿವೇಲ್ ತ್ಯಾಗರಾಜನ್ ಅವರು ತಮ್ಮ ಬಜೆಟ್ ನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಮೇಲೆ ರೂ.3 ಕಡಿತಗೊಳಿಸುವ ಘೋಷಣೆ ಮಾಡಿದ್ದರು. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ ರೂ.1.160 ಕೋಟಿ ನಷ್ಟವಾಗಲಿದೆ. ಆದರೆ, ನಮ್ಮ ಸರ್ಕಾರ ದುಡಿಯುವ ವರ್ಗಕ್ಕೆ ಸ್ವಲ್ಪ ಸಮಾಧಾನ ನೀಡುವ ಪ್ರಯತ್ನವಾಗಿ ಪೆಟ್ರೋಲ್ ಮೇಲಿನ ರಾಜ್ಯ ಸುಂಕವನ್ನು ಕಡಿಮೆ ಮಾಡುವ ನಿರ್ಧಾರಕ್ಕೆ ಬಂದಿದೆ ಎಂದು ಹೇಳಿದ್ದರು.

ಸಿದ್ದರಾಮಯ್ಯ ಅವರು ಇದಕ್ಕೂ ಮುನ್ನ ಮೇಕೆದಾಟು ವಿಚಾರವಾಗಿ ಮಾತನಾಡಿ, ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದರು.

ಮೇಕೆದಾಟು ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಳೆದಿರುವ ಗಟ್ಟಿನಿಲುವಿಗೆ ನಮ್ಮ ಬೆಂಬಲವಿದೆ. ಆದರೆ, ಈ ಯೋಜನೆ ಕುರಿತು ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಬೆಂಬಲಿಸುತ್ತಿದ್ದಾರೆ.ಯಾಕೆ ಈ ದಂದ್ವ ನೀತಿ?’ ಎಂದು ಪ್ರಶ್ನಿಸಿದ್ದರು.


Spread the love

About Laxminews 24x7

Check Also

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ

Spread the love ಬೆಂಗಳೂರು: ಮೈಕ್ರೋ ಫೈನಾನ್ಸಿಯರ್​ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ