ವಿಜಯಪುರ: ಸ್ವಾತಂತ್ರ್ಯ ಸಂಭ್ರಮದ 75ನೇ ವರ್ಷಾಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಘಟನೆ ನಡೆದಿದೆ.
ಧ್ವಜಾರೋಹಣಕ್ಕೆ ಸಚಿವೆ ಜೊಲ್ಲೆ ಆಗಮಿಸುತ್ತಿದ್ದಂತೆ ಘೇರಾವ್ ಹಾಕಿ, ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವೆ ವಿಜಯಪುರ ಜಿಲ್ಲೆಗೆ ಬೇಡವೆಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಚಿವೆ ಜೊಲ್ಲೆ ಧ್ವಜಾರೋಹಣ ಮಾಡಬಾರದೆಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತೆಯರನ್ನು ತಡೆಯಲು ಪೊಲೀಸರ ಹರ ಸಾಹಸ ಪಟ್ಟರು.