Breaking News

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಎಲ್ಲ ಪ್ರಕ್ರಿಯೆ ಗಳು ಆರಂಭ….

Spread the love

ಬೆಳಗಾವಿ  : ರಾಜ್ಯ ಚುನಾವಣಾ ಆಯೋಗದಿಂದ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಚುನಾವಣೆ ಜರುಗಿಸಲು ವೇಳಾಪಟ್ಟಿಯೊಂದಿಗೆ ಆದೇಶ ಹೊರಡಿಸಲಾಗಿದ್ದು, ಆ.16 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಬರುತ್ತಿದ್ದು ಸೆ.6 ರ ವರೆಗೆ ಜಾರಿಯಲ್ಲಿರುತ್ತದೆ.

ಮಹಾನಗರ ಪಾಲಿಕೆ ಸಾಮಾನ್ಯ ಚುನಾವಣೆಗೆ ಸಂಬಂಧಿಸಿದಂತೆ ದಿನದ 24 ಗಂಟೆಯೂ (24 x 7) ಮತದಾರರಿಗೆ ಹಾಗೂ ಸಾರ್ವಜನಿಕರಿಗೆ ಚುನಾವಣಾ ವಿಷಯಗಳ ಕುರಿತು ಯಾವುದೇ ಮಾಹಿತಿ ಅಥವಾ ದೂರುಗಳು ಇದ್ದಲ್ಲಿ ತಕ್ಷಣ ತಿಳಿಸಲು ಮತ್ತು ಚುನಾವಣಾ ವಿಷಯಗಳ ಬಗ್ಗೆ ಅಗತ್ಯ ಮಾಹಿತಿ ಪಡೆಯಲು ಅನುಕೂಲವಾಗುವಂತೆ ಬೆಳಗಾವಿ ಮಹಾನಗರ ಪಾಲಿಕೆಯ ಮುಖ್ಯ ಕಛೇರಿಯಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ.

ಚುನಾವಣಾ ವಿಷಯದ ಕುರಿತು ಸಾರ್ವಜನಿಕರು ಮಾಹಿತಿ ಅಥವಾ ದೂರುಗಳನ್ನು ಸ್ಥಿರ ದೂರವಾಣಿ ಸಂಖ್ಯೆಗಳಾದ 0831-2405337 ಮತ್ತು 0831-2405300 ಹಾಗೂ ಮೊಬೈಲ್ ಸಂಖ್ಯೆ 9481504229 ಕ್ಕೆ ಕರೆ ಮಾಡಿ ತಿಳಿಸಬಹುದು ಎಂದು ಮಹಾನಗರ ಪಾಲಿಕೆ‌ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ

Spread the love ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ ಚಿಕ್ಕೋಡಿ: ಕೃಷ್ಣಾ ಸೇರಿದಂತೆ ದೂಧಗಂಗಾ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ