Breaking News

ಗ್ಯಾಸ್ ಸಿಲಿಂಡರ್ ಲೀಕ್, ಹೊತ್ತಿ ಉರಿದ ಮನೆ – ತಪ್ಪಿದ ಭಾರೀ ಅನಾಹುತ

Spread the love

ಚಿಕ್ಕೋಡಿ: ಆಕಸ್ಮಿಕ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ತಗುಲಿ ಮನೆ ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರಭುವಾಡಿಯಲ್ಲಿ ನಡೆದಿದೆ.

ದಿಲೀಪ್ ಶಂಕರ್ ಕದಂ ಎಂಬವರ ಮನೆಯಲ್ಲಿದ್ದ ಗ್ಯಾಸ್ ಲೀಕ್ ಆಗಿ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಮನೆಗೆ ಬೆಂಕಿ ಹತ್ತಿ ಮನೆಯಲ್ಲಿದ್ದ ವಸ್ತುಗಳು ನಾಶವಾಗಿವೆ. ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಧಗಧಗನೆ ಮನೆ ಹೊತ್ತಿ ಉರಿದಿದೆ. ಆಕಸ್ಮಿಕವಾಗಿ ಗ್ಯಾಸ್ ಲೀಕ್ ಆಗಿದ್ದರಿಂದ ಘಟನೆ ಸಂಭವಿಸಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಮನೆಯ ಸದಸ್ಯರು ಪಾರಾಗಿದ್ದಾರೆ.

ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ನಂದಗಡದ  ಶ್ರೀಮಠದಲ್ಲಿ ಗೋ ಶಾಲೆ ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗೆ ಮನವಿ

Spread the love ಖಾನಾಪೂರ: ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದ ಶ್ರೀ ಮಠದ ಉತ್ತರಾಧಿಕಾರಿಗಳಾದ ಪೂಜ್ಯ ಶ್ರೀ ಚನ್ನವೀರ ದೇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ