Breaking News

ಸಿದ್ದರಾಮಯ್ಯ ಹೇಳುವುದೆಲ್ಲ ಉಲ್ಟಾ ಆಗುತ್ತೆ; ಅವರ ಬಾಯಲ್ಲಿ ಉಲ್ಟಾ ಮಚ್ಚೆಯಿದೆ ಎಂದ ಸಿ.ಟಿ.ರವಿ

Spread the love

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದು, ಸಿದ್ದರಾಮಯ್ಯ ಹೇಳುವುದೆಲ್ಲ ತದ್ವಿರುದ್ಧವಾಗುತ್ತೆ ಎಂದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಸಿದ್ದರಾಮಯ್ಯ ಏನೇ ಹೇಳಿದರೂ ಅದು ಈವರೆಗೂ ಉಲ್ಟಾ ಆಗಿದೆ. ಇನ್ಮುಂದೆಯೂ ಹಾಗೇ ಆಗುತ್ತೆ. ಅವರ ಬಾಯಲ್ಲಿ ಉಲ್ಟಾ ಮಚ್ಚೆಯಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮೀನು ಹಿಡಿಯಲು ಹೋದವರಿಗೆ ಕಾದಿತ್ತು ಶಾಕ್…!

ಪ್ರಧಾನಿ ಮೋದಿ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದರು, ಆದರೆ ಮೋದಿ ಎರಡನೇ ಅವಧಿಗೂ ಪ್ರಧಾನಿಯಾದರು. 2018ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದರು ಅದು ಸಾಧ್ಯವಾಗಿಲ್ಲ. ತಾವು ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದರು ಆದರೆ ಅದೂ ಸಾಧ್ಯವಾಗಿಲ್ಲ ಬಿಜೆಪಿ ಅಧಿಕಾರಕ್ಕೆ ಬಂತು. ಈಗ ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ, ಬಿಜೆಪಿ ಉಳಿಯಲ್ಲ ಎಂದು ಹೇಳುತ್ತಿದ್ದಾರೆ. ಅಂದರೆ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಬರಲ್ಲ, ಬಿಜೆಪಿಯೇ ಅಧಿಕಾರಕ್ಕೆ ಬರುತ್ತೆ ಎಂದರ್ಥ. ಸಿದ್ದರಾಮಯ್ಯ ಏನು ಹೇಳುತ್ತಾರೆ ಅದು ಉಲ್ಟಾ ಆಗುತ್ತೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ