Breaking News

ವಿರೋಧಿಗಳಿಗೆ ಖಡಕ್ ಸಂದೇಶ ರವಾನಿಸಿದ ಸಿಎಂ

Spread the love

ಬೆಂಗಳೂರು: ವಿರೋಧಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ವೇದಿಕೆಯಿಂದಲೇ ಖಡಕ್ ಸಂದೇಶ ರವಾನಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನನ್ನ ಬಗ್ಗೆ ಅನುಮಾನ, ಟೀಕೆಗಳು ವ್ಯಕ್ತವಾಗುತ್ತಿದೆ. ನನ್ನ ಬಗೆಗಿನ ಟೀಕೆಗಳು ನನಗೆ ಆಶಿರ್ವಾದ, ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಹೊಸ ಚಿಂತನೆ, ಹೊಸ ಹಾದಿ, ಹೊಸ ದಿಕ್ಸೂಚಿಯೊಂದಿಗೆ ನವ ಕರ್ನಾಟಕ ನಿರ್ಮಾಣದ ಸಂಕಲ್ಪ ಮಾಡಿದರು.

ನನಗೆ ಕೇವಲ 20 ತಿಂಗಳು ಮಾತ್ರ ಅಧಿಕಾರಾವಧಿ ಅವಕಾಶವಿದೆ ಎಂಬ ಅರಿವಿದೆ. ಅಲ್ಪಾವಧಿ, ದೀರ್ಘಾವಧಿ ಯೋಜನೆಗಳನ್ನು ಪ್ರತ್ಯೇಕವಾಗಿ ರೂಪಿಸಿ, ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ಯೋಜನೆಗಳನ್ನು ನೂರರಷ್ಟು ಹೇಗೆ ಜಾರಿಗೆ ತರಬೇಕು ಎಂಬುದು ಗೊತ್ತಿದೆ. ನನ್ನ ಮುಂದೆ ನೂರಾರು ಸವಾಲುಗಳಿವೆ. ಟೀಕೆ ನನ್ನ ಪಾಲಿನ ಆಶೀರ್ವಾದ. ಸವಾಲುಗಳನ್ನೇ ಮೆಟ್ಟಿಲನ್ನಾಗಿಸಿಕೊಂಡು ನಿಲ್ಲುತ್ತೇನೆ ಎಂದು ಹೇಳುವ ಮೂಲಕ ವಿರೋಧಿಗಳಿಗೆ ಸಿಎಂ ಖಡಕ್ ಸಂದೇಶ ರವಾನಿಸಿದರು


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ