ಬೆಂಗಳೂರು: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ಮೆರವಣಿಗೆ ನಡೆಸುವ ವೇಳೆಯಲ್ಲಿ ಅವಘಡವೊಂದು ಸಂಭವಿಸಿದ್ದು, ಪೊಲೀಸ್ ಸಿಬ್ಬಂದಿಯ ಕಾಲಿನ ಮೇಲೆ ಜೀಪ್ ಹರಿದಿದೆ.

ಇಂದು ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ದೆಹಲಿಯಿಂದ, ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಚಿವರು ಆಗಮಿಸಿದ ವೇಳೆ ಅವರನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿತ್ತು. ಸಾಕಷ್ಟು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಿಕ್ಕಜಾಲ ಪೋಲಿಸ್ ಠಾಣೆಯ ಸಿಬ್ಬಂದಿ ಶಿವಕುಮಾರ್ ಕಾಲಿನ ಮೇಲೆ ಮೆರವಣಿಗೆ ನಡೆಸುತ್ತಿದ್ದ ಜೀಪ್ನ ಚಕ್ರ ಹರಿದ ಪರಿಣಾಮ ಸಿಬ್ಬಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಇತರೆ ಪೊಲೀಸ್ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
Laxmi News 24×7