Breaking News

ಶಾಲೆ ಆರಂಭಕ್ಕೆ ಹೊಸ ಗೈಡ್ ಲೈನ್ ಪ್ರಕಟ

Spread the love

ಬೆಂಗಳೂರು: ಆಗಸ್ಟ್ 23ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಆಗಸ್ಟ್ 23ರಿಂದ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಲಿದ್ದು ಅರ್ಧ ದಿನ ಮಾತ್ರ ತರಗತಿಗಳು ನಡೆಯಲಿವೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಗೈಡ್ ಲೈನ್ ಪ್ರಮುಖಾಂಶಗಳು:

ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10-1:30 ಗಂಟೆಯವರೆಗೆ ತರಗತಿಗಳು ನಡೆಯಲಿವೆ

ಶನಿವಾರ ಬೆಳಿಗ್ಗೆ 10ರಿಂದ 12:30ವರೆಗೆ ತರಗತಿಗಳು

ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ

ಮಕ್ಕಳಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ವಿದ್ಯಾರ್ಥಿಗಳು ಮನೆಯಿಂದಲೇ ಊಟ/ಉಪಹಾರ ತರಬೇಕು

ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ದಾಯ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ, ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲೂ ಹಾಜರಾಗಬಹುದು
ಶಾಲೆಗಳಲ್ಲಿ ಶುದ್ಧ ಬಿಸಿ ನೀರಿನ ವ್ಯವಸ್ಥೆ

ಶಿಕ್ಷಕರು 15-20 ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿ ಭೌತಿಕ ತರಗತಿ ನಡೆಸಬೇಕು


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ