Breaking News
Home / ನವದೆಹಲಿ / ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಚಾಲನೆ

ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಚಾಲನೆ

Spread the love

ಬೆಂಗಳೂರು : ಬಿಬಿಎಂಪಿ ಹಮ್ಮಿಕೊಂಡಿರುವ ‘ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಗೋವಿಂದರಾಜ ನಗರದ ಕಾವೇರಿಪುರ ವಾರ್ಡ್‍ನಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಶ್ರೀ ವಿ ಸೋಮಣ್ಣ ಅವರು, ಈ ಕಾರ್ಯಕ್ರಮದಡಿಯಲ್ಲಿ ವೈದ್ಯರು ಪ್ರತಿ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ.

ಅಲ್ಲದೇ, ಕೋವಿಡ್ ಸೋಂಕಿನ ನಿಯಂತ್ರಣದ ಬಗ್ಗೆ ಸಲಹೆ ನೀಡಲಿದ್ದಾರೆ. ಪ್ರತಿ ಕುಟುಂಬಕ್ಕೂ ಕೊರೋನಾ ಬಗ್ಗೆ ಅರಿವು ಮೂಡಿಸುವ ಕರಪತ್ರಗಳನ್ನು ವೈದ್ಯರು ವಿತರಿಸಲಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

ಇನ್ನು, ವೈದ್ಯರು ಕುಟುಂಬಸ್ಥರ ದೀರ್ಘಕಾಲದ ರೋಗಗಳ ಬಗ್ಗೆ ಮತ್ತು ಕೋವಿಡ್ ಲಸಿಕೆ ಪಡೆದ ಬಗ್ಗೆ ಆನ್ ಲೈನ್ ನಲ್ಲಿನಮೂದಿಸುವುದರಿಂದ ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಅದರಲ್ಲೂ ಕೊರೋನಾ ಸೋಂಕಿತರ ಪತ್ತೆಗೆ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿರುವುದರಿಂದ ಸೋಂಕು ನಿಯಂತ್ರಣಕ್ಕೆ ಅನುಕೂಲವಾಗಲಿದೆ.

ಇನ್ನು ಈ ಸದಾವಕಾಶವನ್ನು ಎಲ್ಲರೂ ಉಪಯೋಗಿಸಿಕೊಳ್ಳುವುದರಮೂಲಕ ಆರೋಗ್ಯವಂತರಾಗೋಣ ಎಂದು ಸಚಿವರು ಹೇಳಿದರು.

ಕಾರ್ಯಕ್ರಯ ವೈದ್ಯರ ತಂಡ, ಸ್ಥಳೀಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ