Breaking News

ರಾಜಧಾನಿಯಲ್ಲಿ ಮುಂದಿನ ಆಗಸ್ಟ್‌ 3೦ ರ ವರೆಗೆ ನೈಟ್‌ ಕರ್ಫ್ಯೂ ಮುಂದುವರಿಕೆ

Spread the love

ಬೆಂಗಳೂರು: ನಗರದಲ್ಲಿ ಆಗಸ್ಟ್ 30 ರ ವರೆಗೆ ನೈಟ್‌ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು (ಆಗಸ್ಟ್ 17) ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿತ್ತು. ಜೊತೆಗೆ, ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಹಾಕಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿತ್ತು. ಇದೀಗ, ರಾತ್ರಿ ಕರ್ಫ್ಯೂ ಆದೇಶವನ್ನು ಈ ತಿಂಗಳ ಅಂತ್ಯದ ವರೆಗೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ. ಹಾಗಾಗಿ, ಬಹುತೇಕ ಈಗಿರುವ ನಿಯಮಗಳು ಇನ್ನೂ ಹದಿನೈದು ದಿನಗಳ ಕಾಲ ಬೆಂಗಳೂರಿನಲ್ಲಿ ಮುಂದುವರಿಯಲಿದೆ.

ರಾತ್ರಿ 9ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ, ಮೆಟ್ರೋ ಕೊನೆಯ ರೈಲು ರಾತ್ರಿ 9 ಗಂಟೆ ಬದಲಾಗಿ 8 ಗಂಟೆಗೆ ಸಂಚರಿಸಲಿದೆ. ಮೆಟ್ರೋ ಕೊನೆಯ ರೈಲು ರಾತ್ರಿ 8 ಗಂಟೆಗೆ ಹೊರಡಲಿದೆ. ಆ ಬಳಿಕ, ಮೆಟ್ರೋ ರೈಲು ಸೇವೆ ಇರುವುದಿಲ್ಲ ಎಂದು ತಿಳಿಸಲಾಗಿತ್ತು. ಕೊನೆಯ ಮೆಟ್ರೋ ರೈಲು ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಹೊರಡುತ್ತದೆ. ಈ ಬದಲಾವಣೆಯನ್ನು ಆಗಸ್ಟ್ 7 ರಿಂದ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿತ್ತು.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ