Breaking News

ಡಿಸ್ಟರ್ಬ್​ ಮಾಡಬೇಡ ಅಮ್ಮಾ..’ ರೂಮಿಗೆ ತೆರಳಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Spread the love

ಕಲಬುರಗಿ: ಪೋಷಕರಿಂದ ಆನ್ ಲೈನ್ ಕ್ಲಾಸ್​ಗೆ ತೊಂದರೆ ಆಯ್ತು ಅಂತ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.

17 ವರ್ಷದ ಗುರುಚರಣ್ ಉಡುಪಾ ಆತ್ಮಹತ್ಯೆ ಮಾಡಿಕೊಂಡ ಯುವಕ. ಗುರುಚರಣ್ ಉಡುಪಿಯ ಪ್ರತಿಷ್ಠಿತ ಕಾಲೇಜ್​ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಡಿ ಪಟ್ಟಣದ ಬಿರ್ಲಾ ಕ್ವಾಟರ್ಸ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಎರಡು ದಿನದ ಹಿಂದೆ ಆನ್​ಲೈನ್​ ಕ್ಲಾಸ್​ನಲ್ಲಿದ್ದಾಗ ಅವ್ರ ತಂದೆ ತಾಯಿ ಡಿಸ್ಟರ್ಬ್​ ಮಾಡಿದ್ದಾರಂತೆ. ಈ ವೇಳೆ ಡಿಸ್ಟರ್ಬ್ ಮಾಡಬೇಡ ಅಮ್ಮಾ ಎಂದು ಹೇಳಿದ್ದಾನೆ ಎನ್ನಲಾಗಿದೆ. ನಂತರ ನೊಂದು ರೂಮಿ​ನೊಳಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ವರದಿಯಾಗಿದೆ.

ಪ್ರಕರಣ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ತನಿಖೆ ಬಳಿಕ ಆತ್ಮಹತ್ಯೆಯ ಸತ್ಯಾಸತ್ಯತೆ ಬಯಲಾಗಲಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ