Breaking News

ಹೊಸಪೇಟೆ : ಹಂಪಿ‌ ನದಿ ತಟದಲ್ಲಿ ಬೃಹತ್ ಗಾತ್ರದ ಮೊಸಳೆ‌ ಪ್ರತ್ಯಕ್ಷ

Spread the love

ಹೊಸಪೇಟೆ : ದಕ್ಷಿಣಕಾಶಿ‌ ಖ್ಯಾತಿಯ ಹಂಪಿಯ ತುಂಗಭದ್ರಾ ನದಿಯಲ್ಲಿ‌ ಬೃಹತ್ ‌ಮೊಸಳೆಯೊಂದು ಬುಧವಾರ ಪ್ರತ್ಯಕ್ಷವಾಗಿದೆ.

ಐತಿಹಾಸಿಕ ವಿರೂಪಾಕ್ಷ ದೇವಾಲಯದ ಬಳಿ ಹಾದು ಹೋಗಿರುವ ತುಂಗಭದ್ರಾ ನದಿಯ ಸ್ನಾನಘಟ್ಟದ ಸಮೀಪದ ನದಿ‌‌ ನಡುವಿನ ಬಂಡೆಗಲ್ಲಿನ ಮೇಲೆ ಮೊಸಳೆ ಪ್ರತ್ಯಕ್ಷವಾಗಿದೆ. ಸುಮಾರು ಅರ್ಧ ತಾಸಿಗೂ ಆಧಿಕ ಕಾಲ ಮೊಸಳೆ ಬಂಡೆ ಮೇಲೆ‌ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಸ್ಥಿತಿಯಲ್ಲಿ ಕಂಡು ಬಂದಿತು.

ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ನದಿ ತುಂಬಿ ಹರಿಯುತ್ತಿದೆ. ಹೀಗಾಗಿ ಮೊಸಳೆ ಕಾಣಿಸಿಕೊಂಡಿದೆ‌. ಮೊಸಳೆ‌ ಚಿತ್ರವನ್ನು‌ ಜೋಶಿ ಹಂಪಿ‌ ಎಂಬುವವರು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ