ಬೀದರ: 2021-22ನೇ ಸಾಲಿನ ಚೇತನಾ, ಧನಶ್ರೀ, ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಪ್ರೋತ್ಸಾಹಧನ ಪಡೆಯಲು ಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಚೇತನಾ ಯೋಜನೆ
ಚೇತನಾ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು.
ಧನಶ್ರೀ ಯೋಜನೆ
ಧನಶ್ರೀ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು.
ಅದೇ ರೀತಿ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹ ಧನ ನೀಡಲಾಗುವುದು.
ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಆಗಸ್ಟ್ 27 ರೊಳಗೆ ಸಲ್ಲಿಸಬೇಕು ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೀದರ ಇವರನ್ನು ಭೇಟಿ ಮಾಡಬಹುದು
Laxmi News 24×7