Breaking News
Home / ಜಿಲ್ಲೆ / ಬೆಂಗಳೂರು / ಲೇಡಿ ಪೊಲೀಸ್​ನಿಂದ ರೇಪ್ ಬೆದರಿಕೆ; ಜನತಾ ದರ್ಶನ ವೇಳೆ ಸಿಎಂ ಮುಂದೆ ಮಹಿಳೆ ಅಳಲು

ಲೇಡಿ ಪೊಲೀಸ್​ನಿಂದ ರೇಪ್ ಬೆದರಿಕೆ; ಜನತಾ ದರ್ಶನ ವೇಳೆ ಸಿಎಂ ಮುಂದೆ ಮಹಿಳೆ ಅಳಲು

Spread the love

ಬೆಂಗಳೂರು, ಆ. 19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜನತಾ ದರ್ಶನ ನಡೆಸಿದ ವೇಳೆ ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗಮನ ಸೆಳೆಯಿತು. ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೊಮ್ಮಾಯಿ ಅವರು ಜನತಾ ದರ್ಶನ ನಡೆಸಿ ಸಾರ್ವುಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಮಹಿಳೆಯೊಬ್ಬರು ಸಿಎಂಗೆ ಅಹವಾಲು ಸಲ್ಲಿಸಲು ಸಾಕಷ್ಟು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸಿಎಂ ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡತೊಡಗಿದಾಗ ಆ ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ಮುಖ ನೋಡಿ ಮಣೆ ಹಾಕಬಾರದು ಎಂದು ಗೊಣಗಿದರು. ಇದನ್ನ ಕೇಳಿಸಿಕೊಂಡ ಸಿಎಂ ಅವರು ಕಾರನ್ನ ನಿಲ್ಲಿಸಿ ಅ ಮಹಿಳೆಯ ಸಮಸ್ಯೆ ಆಲಿಸಿ ಅವರಿಂದ ಅಹವಾಲು ಸ್ವೀಕರಿಸಿದರು.

ಸಿಎಂ ಬಂದು ಕೇಳಿದಾಗ ಆ ಮಹಿಳೆ ತಮಗೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಂದ ಆಗುತ್ತಿರುವ ತೊಂದರೆ ಬಗ್ಗೆ ಹೇಳಿಕೊಂಡರು. ತಮ್ಮ ಪ್ರಕರಣದಲ್ಲಿ ಮಹಿಳಾ ಸಬ್ ಇನ್ಸ್​ಪೆಕ್ಟರ್ ಅವರು ಚಾರ್ಜ್ ಶೀಟ್ ಮುಚ್ಚಿಡುತ್ತಿದ್ದಾರೆ. ಅಲ್ಲದೇ ತನಗೆ ರೇಪ್ ಬೆದರಿಕೆ ಹಾಕುತ್ತಿದ್ದಾರೆ ಎಂದು ಆ ಮಹಿಳೆ ಗಂಭೀರ ಆರೋಪ ಮಾಡಿದರು. ಆ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಕ್ರಮ ಕೈಗೊಂಡು ಸಸ್ಪೆಂಡ್ ಮಾಡಿಸಿ ಎಂದು ಸಿಎಂಗೆ ಒತ್ತಾಯ ಹೇರಿದರು ಆ ಮಹಿಳೆ.

ಮಹಿಳೆಯ ಅಹವಾಲು ಸ್ವೀಕರಿಸಿದ ಸಿಎಂ ಬಸವರಾಜು ಬೊಮ್ಮಾಯಿ, ಈ ಮಹಿಳೆಯ ವಿಚಾರವನ್ನು ಪರಿಶೀಲಿಸಿ ಸೂಕ್ತ ಕ್ರಮಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿ ಎಂದು ತಮ್ಮ ಜೊತೆಯಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿ ಅಲ್ಲಿಂದ ಹೊರಟರು


Spread the love

About Laxminews 24x7

Check Also

ಮೂಡಲಗಿ | ಕಾರು ಡಿಕ್ಕಿ: ಬಾಲಕ ಸಾವು

Spread the love ಮೂಡಲಗಿ: ತಾಲ್ಲೂಕಿನ ನಾಗನೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಮೀಪ ಸೋಮವಾರ ಮೂಡಲಗಿ- ಗೋಕಾಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ