Breaking News

10 ದಿನ ಜಿಂದಾಲ್ ಪ್ರಕೃತಿ ಚಿಕಿತ್ಸೆಗೆ ಸಿದ್ದರಾಮಯ್ಯ

Spread the love

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಸ್ಟ್ 21ರಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಹತ್ತು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.

ಕಳೆದ ಒಂದು ವರ್ಷದಿಂದ ಹಲವು ಬಾರಿ ಜಿಂದಾಲ್ ಪ್ರಕೃತಿ ಚಿಕಿತ್ಸೆಗೆ ಹೋಗಲು ನಿರ್ಧರಿಸಿದ್ದರೂ ನಾನಾ ಕಾರಣಗಳಿಂದ ಹೋಗಲು ಸಾಧ್ಯವಾಗಿಲ್ಲ. ಕೊರೊನಾ ಸೋಂಕು, ಚುನಾವಣಾ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳಲ್ಲೇ ಬ್ಯುಸಿಯಾಗಿದ್ದ ಸಿದ್ದರಾಮಯ್ಯ ಈಗ ಪ್ರಕೃತಿ ಚಿಕಿತ್ಸೆ ಮೊರೆ ಹೋಗಲು ಮುಂದಾಗಿದ್ದಾರೆ.

ಪೋಸ್ಟ್ ಕೋವಿಡ್ ಸಮಸ್ಯೆಯಿಂದ ಬಳಲುತ್ತಿರುವ ಸಿದ್ದರಾಮಯ್ಯ ನವರಿಗೆ ಈ ಮೊದಲು ದೇಹದ ಶುಗರ್ ಲೆವಲ್ ಕಂಟ್ರೋಲ್ ನಲ್ಲಿತ್ತು. ಆದರೆ ಕೋವಿಡ್ ಚಿಕಿತ್ಸೆ ಬಳಿಕ ಶುಗರ್ ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದೆ. ಅಲ್ಲದೇ ತೂಕ ಹೆಚ್ಚಳ ಸಮಸ್ಯೆಯಿಂದಲೂ ಚಿಂತಿತರಾಗಿದ್ದಾರೆ ಎನ್ನಲಾಗಿದೆ. ಪಕ್ಷದ ಕಾರ್ಯಕ್ರಮ, ಜಿಲ್ಲಾ ಪ್ರವಾಸಗಳ ನಡುವೆಯೇ ಈಗ ಬಿಡುವು ಮಾಡಿಕೊಂಡು ಪ್ರಕೃತಿ ಚಿಕಿತ್ಸೆಗೆ ತೆರಳಲಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ