Breaking News
Home / ರಾಜ್ಯ / ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕುಟುಂಬ ಸಮೇತ ತುಂಗಭದ್ರಾ ಆಣೆಕಟ್ಟೆಗೆ ಭೇಟಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕುಟುಂಬ ಸಮೇತ ತುಂಗಭದ್ರಾ ಆಣೆಕಟ್ಟೆಗೆ ಭೇಟಿ

Spread the love

ಬಳ್ಳಾರಿ ; ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಕುಟುಂಬ ಸಮೇತರಾಗಿ ತುಂಗಭದ್ರಾ ಆಣೆಕಟ್ಟಿಗೆ ಭೇಟಿ ಕೊಟ್ಟು ವಿಹಂಗಮ ನೋಟವನ್ನು ಕಣ್ತುಂಬಿಸಿಕೊಂಡರು. ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಆಗಮನದಿಂದ ಸ್ಥಳಿಯರ ಮತ್ತು ತುಂಗಭದ್ರಾ ಜಲಾಶಯದ ಅಧಿಕಾರಿಗಳ ಮನಸ್ಸು ಸಂತಸಗೊಂಡಿತ್ತು. ಕಳೆದ ನಾಲ್ಕು ವರ್ಷಗಳಿಂದ ಜಲಾಶಯ ಭರ್ತಿಯಾಗಿದೆ.

ತುಂಗಭದ್ರಾ ಜಲಾಶಯವು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ರೈತರ ಜೀವನಾಡಿಯಾಗಿದೆ. ಈ ಭಾಗಗಳ ರೈತರು ಕೃಷಿಗೆ ಪೂರಕವಾಗಿದೆ ಎಂದು ಇದೇ ಸಂದರ್ಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟರು. ಜಲಾಶಯ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ‘ರೈತನ ಮಗನಾಗಿ ಜಲಾಶಯ ವೀಕ್ಷಿಸಿದ್ದು ಸಂತಸ ತಂದಿದೆ. ಈ ಜಲಾಶಯ ರೈತರ ಕೃಷಿಗೆ ತುಂಬಾ ಅನುಕೂಲವಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಜಲಾಶಯ ಭರ್ತಿಯಾಗಿದೆ’ ಎಂದು ಹರ್ಷ ವ್ಯಕ್ತಪಡಿಸಿದರು. ಜಲಾಶಯ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ‘ರೈತನ ಮಗನಾಗಿ ಜಲಾಶಯ ವೀಕ್ಷಿಸಿದ್ದು ಸಂತಸ ತಂದಿದೆ ಎಂದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ