Breaking News

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ

Spread the love

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್​ ಸಿಂಗ್(89)​ ಬಹುಅಂಗಾಂಗ ವೈಫಲ್ಯದಿಂದಾಗಿ ಇಂದು ನಿಧನರಾಗಿದ್ದಾರೆ.
ಕಲ್ಯಾಣ್ ಸಿಂಗ್ ಅವರನ್ನ ಜುಲೈ 4 ರಂದು ಲಖನೌನ SGPGI ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಲ್ಯಾಣ್ ಸಿಂಗ್ 2 ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. 2014-2019ರ ಅವಧಿಯಲ್ಲಿ ರಾಜಸ್ಥಾನ್​ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಇನ್ನು ಕಲ್ಯಾಣ್ ಸಿಂಗ್ ಸಾವಿಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕಲ್ಯಾಣ್​ ಸಿಂಗ್ ಮಹಾನಾಯಕ, ಮಹಾನ್ ಮಾನವ. ಯುಪಿ ಅಭಿವೃದ್ಧಿಗೆ ಅಳಿಸಲಾಗದ ಕೊಡುಗೆ ನೀಡಿದ್ದಾರೆ. ಭಾರತೀಯ ಮೌಲ್ಯಗಳನ್ನ ಧೃಡವಾಗಿ ಬೇರೂರಿಸಿಕೊಂಡಿದ್ರು. ಅವರ ಮುಂದಿನ ಪೀಳಿಗೆಗಳು ಕೃತಜ್ಞರಾಗಿರುತ್ತಾರೆ ಎಂದು ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

 ವಸ್ತುಪ್ರದರ್ಶನ ಮೈದಾನದಲ್ಲಿ ದಸರಾದಲ್ಲಿ  ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ (Girl) ಶವ ಪತ್ತೆಯಾಗಿದೆ.

Spread the loveಮೈಸೂರು, (ಅಕ್ಟೋಬರ್ 09): ವಸ್ತುಪ್ರದರ್ಶನ ಮೈದಾನದಲ್ಲಿ ದಸರಾದಲ್ಲಿ (Mysuru Dasara 2025) ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ (Girl) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ