Breaking News

ನಡುರಾತ್ರಿ ರಂಗೇರಿದ ಬೆಳಗಾವಿ ರಾಜಕೀಯ: ಪಾಲಿಕೆ ಚುನಾವಣೆಗೆ ಕೈ-ಕಮಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Spread the love

ಬೆಳಗಾವಿ: ಬೆಳಗಾವಿಯ ಮಹಾನಗರ ಪಾಲಿಕೆಯ ಚುನಾವಣೆಯ ಕಾವು ರಂಗೇರುತ್ತಿದೆ. ಸೆಪ್ಟೆಂಬರ್ 3 ರಂದು 58 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ನಡುರಾತ್ರಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿವೆ.

ಬಿಜೆಪಿಯಿಂದ ರಾತ್ರಿ ತುರ್ತು ಸುದ್ದಿ ಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಾಸಕ ಅಭಯ್ ಪಾಟೀಲ್, ಸಂಸದೆ ಮಂಗಲಾ ಅಂಗಡಿ, ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ 21 ಜನರ ಅಭ್ಯರ್ಥಿಗಳ ಮೊದಲ ಹಂತದ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಸಂಸದೆ ಮಂಗಲಾ ಅಂಗಡಿ ಹಾಗೂ ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಉಳಿದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಸಾಧ್ಯತೆ ಇದೆ.

 

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕೆಲವು ಗಂಟೆಯಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ ಕೆಲವರು. ಶಾಸಕರು ಮುಂದೆಯೇ ಅಸಮಾಧಾನ ಹೊರಹಾಕಿ ಇವರು ಆಕ್ರೋಶ ವ್ಯಕ್ತಪಡಿಸಿದರು.

ಈ ಮುಂಚೆ ವಾರ್ಡ್ ನಂಬರ 35ಕ್ಕೆ ಭಾರತಿ ಎಂಬುವರಿಗೆ ಟಿಕೆಟ್ ಪಕ್ಕಾ ಎಂದು ಹೇಳಲಾಗಿತ್ತು. ಆದ್ದರಿಂದ ಇವರು ತಮಗೇ ಟಿಕೆಟ್‌ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಲಕ್ಷ್ಮಿ ಎಂಬುವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ಭಾರತಿ ಸಹೋದರ ಬಿಜೆಪಿ ಶಾಸಕರು ಮುಖಂಡರ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ನು ಅತ್ತ ಬಿಜೆಪಿ ಅಭ್ಯರ್ಥಿಗಳ ಮೊದಲು ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಇತ್ತ ಕಾಂಗ್ರೆಸ್‌ ಕೂಡ ಮಧ್ಯರಾತ್ರಿಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಅಧ್ಯಕ್ಷ ವಿನಯ್ ನಾವಲಗಟ್ಟಿ, ಹಾಗೂ ಕಾಂಗ್ರೆಸ್ ನಗರ ಅಧ್ಯಕ್ಷ ರಾಜು ಶೆಠ್ ಪಟ್ಟಿ ಬಿಡುಗಡೆ ಮಾಡಿದ್ದಾರೆ. 58 ವಾರ್ಡ್‌ಗಳಿಗೆ ಮೊದಲ ಹಂತದಲ್ಲೇ 58 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕಾಂಗ್ರೆಸ್ ಪಟ್ಟಿ ರಾತ್ರೋ ರಾತ್ರಿ ಬಿಡುಗಡೆ, ಇಲ್ಲಿದೆ ಅಭ್ಯರ್ಥಿ ಗಳ ಡೀಟೇಲ್ಸ್


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ