Breaking News

ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ, ಹೊಸಬರಿಂದಲೇ ಪಕ್ಷ ಕಟ್ಟುತ್ತೇನೆ: H.D.K.

Spread the love

ಹುಬ್ಬಳ್ಳಿ: ಜನತಾ ಪರಿವಾರದ ಹಳಬರನ್ನು ಒಟ್ಟುಗೂಡಿಸುವ ಆಸಕ್ತಿ ಇಲ್ಲ. ಹೊಸಬರಿಂದಲೇ ಪಕ್ಷ ಕಟ್ಟುತ್ತೇನೆ. ನನಗೆ ಮಮತಾ ಬ್ಯಾನರ್ಜಿಯವರೇ ಸ್ಫೂರ್ತಿ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲಾ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ. ಕಾರ್ಯಕರ್ತರಲ್ಲಿ ಇಚ್ಛಾಶಕ್ತಿ ಕೊರತೆ ಇದೆ. ನಾನು ಬೆಂಗಳೂರಿಗೆ ಹೋಗುತ್ತಿದ್ದಂತೆ, ಮನೆಗೆ ಹೋಗಿ ಮಲಗುತ್ತಾರೆ. ಹೀಗಾಗಿ ನಮ್ಮ ಪಕ್ಷ ಉತ್ತರ ಕರ್ನಾಟಕದಲ್ಲಿ ಸಂಘಟನೆ ಆಗುತ್ತಿಲ್ಲ ಎಂದರು.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಜೆಡಿಎಸ್​ಗೆ ಮೃದು ಧೋರಣೆಯಿದೆ ಎನ್ನುವ ಬಗ್ಗೆ ಮಾತನಾಡಿದ ಅವರು, ಬೊಮ್ಮಾಯಿ ಅವರಿಗೆ ಜನತಾ ಪರಿವಾರದಿಂದ ಬಂದವರು ಎಂಬ ಹಳೆಯ ಅರಿವಿದೆ. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಆ ರೀತಿಯ ಭಾವನೆ ಇಲ್ಲ. ಅವರು ಈ ಪಕ್ಷವನ್ನು ಮುಗಿಸಬೇಕು ಅಂತ ತೀರ್ಮಾನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ