ಮೈಸೂರು: ಲಂಚ ಸ್ವೀಕರಿಸಿದ ಪ್ರಕರಣವೊಂದರಲ್ಲಿ ಶಾಲಾ ವಾರ್ಡನ್‌ಗೆ ಜೈಲು ಶಿಕ್ಷೆಯಾಗಿದೆ. ಗಣಪತಿ ಜಕಾತಿ ಎಂಬ ಶಾಲಾ ವಾರ್ಡನ್‌ಗೆ 3 ವರ್ಷ ಸಾದಾ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ 3ನೇ ಹೆಚ್ಚುವರಿ ಸತ್ರ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆರಾಲ್ಡ್ ಆರ್ ಮೆಂಡೋನ್ಸ್ ತೀರ್ಪು ನೀಡಿದ್ದಾರೆ.
ಸರ್ಕಾರಿ ವಿಶೇಷ ಅಭಿಯೋಜಕಿ ಕಲಿಯಂಡ ಮುತ್ತಮ್ಮ ಪೂಣಚ್ಚ ಅವರು ಗೋಳೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಾರ್ಡನ್ ವಿರುದ್ಧ ವಾದ ಮಂಡಿಸಿದ್ದರು .
ಏನಿದು ಪ್ರಕರಣ:
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಗೋಳೂರಿನಲ್ಲಿ ಪ್ರಕರಣದ ನಡೆದಿತ್ತು. ಹಾಸ್ಟೆಲ್ಗೆ ಎಲೆಕ್ಟ್ರಾನಿಕ್ ಉಪಕರಣ ರಿಪೇರಿ ಶುಲ್ಕ ನೀಡಲು ವಾರ್ಡನ್ ಗಣಪತಿ ಜಕಾತಿ ಲಂಚ ಕೇಳಿದ್ದರು. ಆ ಸಂಬಂಧ 2 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದರು. ಅಂದಿನ ಎಸಿಬಿ ಡಿವೈಎಸ್‌ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಅವರು ವಾರ್ಡನ್ ಗಣಪತಿ ಜಕಾತಿ ವಿರುದ್ಧ ಪ್ರಕರಣದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
Laxmi News 24×7