Breaking News

ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು : ಓರ್ವನ ಶವಪತ್ತೆ, ಮತ್ತೋರ್ವನ ಮೃತದೇಹಕ್ಕೆ ಹುಡುಕಾಟ

Spread the love

ಗೋಕಾಕ : ಘಟಪ್ರಭಾ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾದ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ.

ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮದ ವಾಹನ ಚಾಲಕ ಅಶೋಕ ಶ್ರೀಶೈಲ ಡಬ್ಬನ್ನವರ (26), ಪಾಮಲದಿನ್ನಿ ಗ್ರಾಮದ ಕ್ಲೀನರ್ ನಾಗಪ್ಪ ಕಾಡಪ್ಪ ಅಂಗಡಿ (38) ಮೃತರು.

ಕಾಲುವೆಯ ಪಕ್ಕದಲ್ಲಿ ಖಾಸಗಿ ಹಾಲಿನ ಡೈರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು. ಹಾಲಿನ ವಾಹನ ಚಾಲಕ ನೀರು ತರಲು ಹೋಗಿ ಕಾಲುಜಾರಿ ಕಾಲುವೆಗೆ ಬಿದ್ದಿದ್ದಾನೆ.

ಚಾಲಕನನ್ನು ಹಿಡಿಯಲು ಹೋಗಿ ಕ್ಲೀನರ್ ಕೂಡಾ ಕಾಲುವೆಗೆ ಜಾರಿ ಬಿದ್ದಿದ್ದಾನೆ. ಕ್ಲೀನರ್ ನಾಗಪ್ಪ ಅವರ ಮೃತದೇಹ ಪತ್ತೆಯಾಗಿದ್ದು, ಚಾಲಕ ಅಶೋಕ್ ಮೃತದೇಹಕ್ಕಾಗಿ ಗ್ರಾಮಸ್ಥರು ಕಾರ್ಯಾಚರಣೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಘಟಪ್ರಭಾ ಪೊಲೀಸ್ ಠಾಣೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ