Breaking News

ಅಂತರರಾಜ್ಯ ಜಲವಿವಾದ: ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ: ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು: ಅಂತರರಾಜ್ಯ ಜಲ ವಿವಾದಗಳ ಬಗ್ಗೆ ನವದೆಹಲಿಯಲ್ಲಿ ಕಾನೂನು ತಜ್ಞರ ಜತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಅವರು ಮಾದ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು.

ಕರ್ನಾಟಕದ ನೆಲ, ಜಲ, ಭಾಷೆಯ ಹಿತರಕ್ಷಣೆ ಗೆ ಸರ್ವ ಪ್ರಯತ್ನ ಮಾಡಲಾಗುವುದು, ಈ ವಿಷಯದಲ್ಲಿ ಯಾವುದೇ ರೀತಿಯ ಆತಂಕ ಬೇಡ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಇದೆ ತಿಂಗಳ 25 ನೇ ತಾರೀಖಿನಂದು ನವದೆಹಲಿಗೆ ತೆರಳಿ 26 ರಂದು ಎಲ್ಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಆರೋಗ್ಯ, ಹಣಕಾಸು, ಜಲಶಕ್ತಿ , ಕೃಷಿ ಹಾಗೂ ರಕ್ಷಣಾ ಸಚಿವರ ಸಮಯ ಕೇಳಿದ್ದು, ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ