Breaking News

ರೈತರ ಆದಾಯ ದ್ವಿಗುಣಕ್ಕೆ ಎರಡನೇ ಕೃಷಿ ನಿರ್ದೇಶನಾಲಯ ಆರಂಭ : ಸಿಎಂ

Spread the love

ಬೆಂಗಳೂರು ;ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸಲು ರಾಜ್ಯಸರ್ಕಾರ ಹಲವಾರು ಕ್ರಮಗಳನ್ನು ಜಾರಿಗೊಳಿಸಲಿದ್ದು, ರೈತರ ಉತ್ಪನ್ನಗಳ ಮೌಲ್ಯ ಹೆಚ್ಚಿಸಲು 2ನೇ ಕೃಷಿ ನಿರ್ದೇಶನಾಲಯವನ್ನು ಅಸ್ಥಿತ್ವಕ್ಕೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ, ಪಶುಸಂಗೋಪನೆ, ಡೈರಿ, ಮೀನುಗಾರಿಕೆ ಒಳಗೊಂಡಂತೆ ಆಗ್ರೋ ಉತ್ಪನ್ನಗಳ ಸಂಸ್ಕರಣೆಗೆ ಒತ್ತು ನೀಡಿ ಉತ್ಪನ್ನಗಳ ಮೌಲ್ಯ ಹೆಚ್ಚಿಸಲು ವಿಶೇಷ ಕಾರ್ಯಪಡೆಯನ್ನು ರಚಿಸಲಾಗುವುದು. ಇದಕ್ಕೆ ಸೆಕೆಂಡರಿ ಅಗ್ರಿಕಲ್ಚರ್ ಡೈರೆಕ್ಟರೇಟ್ ಎಂದು ಹೆಸರಿಟ್ಟು ಕೃಷಿಯಲ್ಲಿ ದೊಡ್ಡ ಬದಲಾವಣೆ ಮಾಡುವ ಮೂಲಕ ರೈತರ ಆದಾಯ ದ್ವಿಗುಣಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.

2023ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯತಂತ್ರ ಕುರಿತಂತೆ ಕೇಂದ್ರ ಸರ್ಕಾರ ರಚಿಸಿರುವ ಉನ್ನತಾಧಿಕಾರ ಸಮಿತಿಯ ಕಾರ್ಯತಂತ್ರ ಕುರಿತಂತೆ ಕೃಷಿ ಸಚಿವಾಲಯದ ಡಾ.ಅಶೋಕ್ ದಳವಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾತ್ಯಕ್ಷಿಕೆ ನಡೆಸಿಕೊಟ್ಟ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಡೀ ದೇಶದಲ್ಲೇ ರೈತರ ಆದಾಯವನ್ನು ದ್ವಿಗುಣಗೊಳಿಸಿದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಬೇಕು ಎಂಬ ಬಯಕೆ ತಮ್ಮದು. ರೈತರ ಆದಾಯ ದ್ವಿಗುಣಕ್ಕೆ ಬಹಳಷ್ಟು ಆಸಕ್ತಿ ತೆಗೆದುಕೊಂಡು ಹಲವಾರು ಕ್ರಮಗಳನ್ನು ಜಾರಿಗೊಳಿಸಲಾಗುವುದು.ರೈತರ ಆದಾಯ ದ್ವಿಗುಣಗೊಳಿಸಲು ಕೆಂದ್ರಸರ್ಕಾರ ನಮ್ಮ ಜತೆ ಕೈಜೋಡಿಸಲು ಸಿದ್ಧವಿದೆ. ಹಾಗಾಗಿ ಇಲ್ಲಿ ರೈತರಿರುವ ಸಮಿತಿಯನ್ನು ರಚಿಸಿ ಕೇಂದ್ರದ ಜತೆ ನಿರಂತರ ಸಂಪರ್ಕದಲ್ಲಿಟ್ಟುಕೊಂಡು ಕರ್ನಾಟಕಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ವರದಿಯನ್ನು ಜಾರಿಗೊಳಿಸುತ್ತೇವೆ ಎಂದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ