Breaking News

ಡಗ್ಸ್ ಜಾಲ ಜಾಲವನ್ನು ನಿರ್ಮೂಲನೆ ಮಾಡುತ್ತೇವೆ : ಗೃಹ ಸಚಿವ ಆರಗ ಜ್ಞಾನೇಂದ್ರ

Spread the love

ಬೆಂಗಳೂರು, ಆ.25- ರಾಜ್ಯದಲ್ಲಿ ಮಾದಕ ದ್ರವ್ಯ ಜಾಲವನ್ನು ನಿರ್ಮೂಲನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.ಕೋರಮಂಗಲದ ಕೆಎಸ್‍ಆರ್‍ಪಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಪಬ್ಲಿಕ್ ಶಾಲೆಯ ಶಿಶು ವಿಹಾರ, ಆಡಳಿತ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಕೆಎಸ್‍ಆರ್‍ಪಿ ತರಬೇತಿ ಶಾಲೆ- 4ನೆ ಪಡೆ ನವೀಕೃತ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾದಕ ವಸ್ತುಗಳ ವ್ಯಸನಿಗಳಾಗಿ ಯುವ ಪೀಳಿಗೆ ಹಾಳಾಗುವುದನ್ನು ತಪ್ಪಿಸಬೇಕಿದೆ ಎಂದರು.

ರಾಜ್ಯದಲ್ಲಿ ಯುವಕರು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುವುದನ್ನು ತಪ್ಪಿಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು. ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉನ್ನತೀಕರಿಸಲು ಹೆಚ್ಚು ಆದ್ಯತೆ ನೀಡಲಾಗುವುದು. ಮೊಬೈಲ್ ಪ್ಲೊರೆನ್ಸಿಕ್ ಲ್ಯಾಬ್‍ಗೂ ಕೂಡ ಇಂದು ಚಾಲನೆ ನೀಡಲಾಗಿದೆ. ಆಡುಗೋಡಿಯಲ್ಲಿ ಪೊಲೀಸ್ ಇಲಾಖೆಗೆ ಸೇರಿದ ನೂರು ಎಕರೆ ಜಾಗವಿದೆ. ಅಲ್ಲಿ ಮತ್ತೊಂದು ಪೊಲೀಸ್ ಪಬ್ಲಿಕ್ ಶಾಲೆ ಆರಂಭ ಮಾಡುವ ಉದ್ದೇಶವಿದೆ. ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪೊಲೀಸ್ ಮಕ್ಕಳ ಶಾಲೆ, ಶಿಶು ವಿಹಾರವನ್ನು ನೋಡಿ ತುಂಬ ಸಂತೋಷವಾಗಿದೆ. ಶಿಕ್ಷಣ ವಾಣಿಜ್ಯೀಕರಣವಾಗಿದ್ದು, ಹೆಚ್ಚು ಹಣ ಉಳ್ಳವರಿಗೆ ಮಾತ್ರ ಒಳ್ಳೆಯ ವಿದ್ಯಾಭ್ಯಾಸ ಸಿಗುವಂತಾಗಿದೆ. ಸಾಮಾನ್ಯ ಪೊಲೀಸ್ ಕುಟುಂಬದ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಪೊಲೀಸ್ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿಯೂ ಕೂಡ ಇತರೆ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳಿಗೆ ನಮ್ಮ ಸಮುದಾಯ ಮುಖ್ಯ ಎಂಬ ಧ್ಯೇಯ, ಮಾನವೀಯ ಮೌಲ್ಯಗಳ ಸಂಸ್ಕಾರ ಕಲಿಸುವ ಕೆಲಸ ಶಾಲೆಗಳಲ್ಲಿ ಆಗಬೇಕು. ಸಾಕ್ಷರತೆ ಸಂಖ್ಯೆ ಹೆಚ್ಚಾಗಿದ್ದರೂ ಅಪರಾಧೀಕರಣ ಕಡಿಮೆಯಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಪೆÇಲೀಸ್ ಇಲಾಖೆಯನ್ನು ವಹಿಸಿಕೊಂಡಾಗ ಆತಂಕವಿತ್ತು. ಇತರೆ ಇಲಾಖೆಗಳು ಅಭಿವೃದ್ಧಿ ಕಾರ್ಯಕ್ಕೆ ಒತ್ತು ಕೊಡುತ್ತವೆ. ಆದರೆ, ಈ ಇಲಾಖೆಯ ಕಾರ್ಯವೈಖರಿಯೇ ಬೇರೆಯಾಗಿದೆ. ನಾಗರಿಕರು ನೆಮ್ಮದಿಯ ಬದುಕು ನಡೆಸಲು ದಿನದ 24 ಗಂಟೆಯೂ ಪೊಲೀಸರು ಎಚ್ಚರವಾಗಿರಬೇಕು. ಆ ಮೂಲಕ ಜನರ ಮಾನ, ಪ್ರಾಣ, ಆಸ್ತಿ ರಕ್ಷಣೆ ಮಾಡಬೇಕಾಗಿದೆ ಎಂದು ಹೇಳಿದರು.

ರಾಷ್ಟ್ರದ ಗಡಿ ಕಾಯುವ ಸೈನಿಕರಿಗೆ ತಮ್ಮ ಶತ್ರುಗಳು ಯಾರೆಂಬುದರ ಅರಿವಿರುತ್ತದೆ. ಆದರೆ, ನಾಡಿನ ಒಳಗೆ ಸೇವೆ ಸಲ್ಲಿಸುವ ಪೊಲೀಸರಿಗೆ ಆ ರೀತಿಯ ಮಾಹಿತಿ ಇರುವುದಿಲ್ಲ. ಒಂದು ರೀತಿಯಲ್ಲಿ ಸವಾಲಿನ ಕೆಲಸವನ್ನುಪೊಲೀಸರು ಮಾಡಬೇಕಾಗಿದೆ ಎಂದರು. ನಾಗರಿಕ ಸಮಾಜವನ್ನು ರಕ್ಷಣೆ ಮಾಡಲು ಹಗಲಿರುಳು ಶ್ರಮಿಸುವ ಪೊಲೀಸರು ಮತ್ತು ಅವರ ಕುಟುಂಬದವರ ಹಿತ ಕಾಪಾಡಲು ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಎಲ್ಲ ಪೊಲೀಸರಿಗೆ ವಸತಿ ಸೌಲಭ್ಯ ದೊರೆತಿಲ್ಲ. ಹೀಗಾಗಿ ವಸತಿ ಸೌಲಭ್ಯವನ್ನು ಹೆಚ್ಚಳ ಮಾಡಬೇಕು. ಕೋರಮಂಗಲದಲ್ಲಿ ಪ್ರಾರಂಭಿಸಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ 1600 ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅವಕಾಶ ಒದಗಿಸಿದೆ. ಇದು ಸುಸಜ್ಜಿತ ಶಾಲೆಯಾಗಿದ್ದು, ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮತ್ತೊಂದು ಪೊಲೀಸ್ ಪಬ್ಲಿಕ್ ಶಾಲೆ ಪ್ರಾರಂಭಿಸುವಂತೆ ಗೃಹ ಸಚಿವರಲ್ಲಿ ಅವರು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್, ರಾಜ್ಯ ಅಪರ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್‍ಕುಮಾರ್, ಡಾ.ಎ.ಎಸ್.ಎನ್.ಮೂರ್ತಿ, ಬಿಬಿಎಂಪಿ ಮಾಜಿ ಸದಸ್ಯೆ ಸರೋಜಮ್ಮ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ