Breaking News

ವಿದ್ಯಾರ್ಥಿನಿ ವಿಡಿಯೋ ಮಾಡಿ 3 ಲಕ್ಷಕ್ಕೆ ಬೇಡಿಕೆ : ಆರೋಪಿಗಳಿಗಾಗಿ ಶೋಧ

Spread the love

ಮೈಸೂರು : ಲಲಿತಾದ್ರಿಪುರದಲ್ಲಿ ನಡೆದಿದ್ದ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇದೀಗ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಗ್ಯಾಂಗ್‌ರೇಪ್‌ ಮಾಡಿದ್ದ ಆರೋಪಿಗಳು ಯುವತಿಯ ವಿಡಿಯೋವನ್ನು ಸೆರೆ ಹಿಡಿದು, ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡಿದೇ ಇದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆನ್ನುವ ಸ್ಫೋಟಕ‌ ಮಾಹಿತಿ ಬಹಿರಂಗವಾಗಿದೆ.

 

ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿಯೋರ್ವಳು ತನ್ನ ಸ್ನೇಹಿತನ ಜೊತೆಗೆಯಲ್ಲಿ ಕುಳಿತಿದ್ದ ವೇಳೆಯಲ್ಲಿ ಬಂದಿದ್ದ ಕಾಮುಕರು, ಯುವಕನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದರು. ಅಲ್ಲದೇ ಕಾಮುಕರ ಅಟ್ಟಹಾಸವನ್ನು ವಿಡಿಯೋ ಮಾಡಿಕೊಂಡು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ.

 

ಪೊಲೀಸರ ಮುಂದೆ ಸಂತ್ರಸ್ತೆ ಹಲವು ಮಾಹಿತಿಯನ್ನು ನೀಡಿದ್ದಾಳೆ. ಇನ್ನೊಂದೆಡೆಯಲ್ಲಿ ಪೊಲೀಸರು ಈಗಾಗಲೇ ಘಟನಾ ಸ್ಥಳದ ಮಹಜರು ಕಾರ್ಯವನ್ನು ನಡೆಸಿದ್ದಾರೆ. ಸ್ಥಳದಲ್ಲಿ ಯಾವುದಾದರೂ ಸಾಕ್ಷ್ಯಗಳು ಸಿಗುತ್ತವೆಯೇ ಅನ್ನೋ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಘಟನಾ ಸ್ಥಳದಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ

 

ಇನ್ನು ಗ್ಯಾಂಗ್ ರೇಪ್ ನಡೆದ ಸ್ಥಳದಲ್ಲಿ ಅನೈತಿಕ ಚಟುವಟಿಕೆಯ ಪ್ರಮುಖ ಅಡ್ಡ ಅಂತ ಹೇಳಲಾಗುತ್ತಿದೆ. ಸ್ಥಳದಲ್ಲಿ ಮದ್ಯದ ಬಾಟಲ್ ಸೇರಿದಂತೆ ಇತರೆ ವಸ್ತುಗಳು ಪತ್ತೆಯಾಗಿದೆ. ಇಲ್ಲಿ ನಿರಂತರವಾಗಿ ಅನೈತಿಕ ಚಟುವಟಿಕೆ ನಡೆದಿರುವ ಪುರಾವೆಗಳು ಸಿಕ್ಕಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ