Breaking News

ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೇ ಸಂಚಾರ, ಮಹಾರಾಷ್ಟ್ರ ಗಡಿಯಲ್ಲಿ ಕಾಟಾಚಾರದ ಚೆಕಿಂಗ್

Spread the love

ಚಿಕ್ಕೋಡಿ: ಶೀಘ್ರದಲ್ಲೇ ಕೊರೊನಾ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಹೀಗಾಗಿ ಸರ್ಕಾರ ಮಹಾರಾಷ್ಟ್ರ ಗಡಿಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಕೊರೊನಾ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶಿಸಲು ಬಿಡಬೇಕೆಂದು ಆದೇಶಿಸಿದೆ. ಆದರೆ ಚೆಕ್ ಪೋಸ್ಟ್‍ಗಳಲ್ಲಿ ಕಾಟಾಚಾರಕ್ಕೆ ಚೆಕ್ ಮಾಡಲಾಗುತ್ತಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರ ವಲಯದಲ್ಲಿ ಮಹಾರಾಷ್ಟ್ರದ ಗಡಹಿಂಗ್ಲಜ್ ತಾಲೂಕಿನ ಗಡಿಯಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್‍ನಲ್ಲಿ ಅಧಿಕಾರಿಗಳು ಕಾಟಾಚಾರಕ್ಕೆ ಎನ್ನುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಹಾರಾಷ್ಟ್ರದಿಂದ ಬರುವ ವಾಹನಗಳನ್ನು ತಪಾಸಣೆ ಮಾಡದೇ ನಿದ್ರಾವಸ್ಥೆಯಲ್ಲಿದ್ದಾರೆ. ಹೀಗಾಗಿ ಮಹಾರಾಷ್ಟ್ರದಿಂದ ಜನರು ನಿರಾತಂಕವಾಗಿ ನೆಗೆಟಿವ್ ವರದಿ ಇಲ್ಲದೇ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 

ಕಡ್ಡಾಯವಾಗಿ ಕೊರೊನಾ ನೆಗೆಟಿವ್ ವರದಿ ಇದ್ದವರು ಮಾತ್ರ ರಾಜ್ಯ ಪ್ರವೇಶಿಸಬೇಕೆಂದು ಆದೇಶ ಹೊರಡಿಸಲಾಗಿದೆ. ಆದರೆ ಅಧಿಕಾರಿಗಳು ಡೋಂಟ್ ಕೇರ್ ಎಂದು ಬೇಕಾಬಿಟ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ನಿರ್ಲಕ್ಷ್ಯ ವಹಿಸುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ