ಚಾಮರಾಜನಗರ: ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, ಅದನ್ನು ನಾವು ಆಹಾರ ಭದ್ರತೆಯಡಿ 4.1 ಕೋಟಿ ಫಲಾನುಭವಿಗಳಿಗೆ ವಿತರಿಸುತ್ತಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದರು.
ಪಡಿತರದಾರರ ಇ ಕೆವೈಸಿ ಶೇ.70 ಮುಗಿದಿದ್ದು, ಅನರ್ಹ ಪಡಿತರದಾರರನ್ನು ಕೈ ಬಿಡುವ ಉದ್ದೇಶದಿಂದ ಕಾರ್ಯಕ್ರಮ ನಡೆಯುತ್ತಿದೆ. ಇ ಕೆವೈಸಿ ಪ್ರಕ್ರಿಯೆ ಪೂರ್ಣವಾದ ಬಳಿಕ ಎಷ್ಟು ಪಡಿತರ ಉಳಿತಾಯ ಆಗಲಿದೆ ಎಂಬುದು ಗೊತ್ತಾಗಲಿದೆ ಎಂದು ತಿಳಿಸಿದರು.