Breaking News

ಮೈಸೂರು ಪ್ರಕರಣದ ತಪ್ಪಿತಸ್ಥರಿಗೆ ಶೀಘ್ರವೇ ಶಿಕ್ಷೆ ಆಗಲಿದೆ : ಸಚಿವೆ ಜೊಲ್ಲೆ

Spread the love

ಮೈಸೂರು : ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ತಪ್ಪಿತಸ್ಥರನ್ನು ಪತ್ತೆಹಚ್ಚಿ ಅವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಸಚಿವೆ ನಮ್ಮ ಸರಕಾರ ಈ ಕೇಸನ್ನು ಗಂಭೀರವಾಗಿ ಪರಿಗಣಿಸಿದೆ, ಶೀಘ್ರವೇ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ, ಅಲ್ಲದೆ ಹೆಣ್ಣು ಮಕ್ಕಳ ಸುರಕ್ಷತೆಗೆ ಇನ್ನೂ ಹೆಚ್ಚಿನ ಗಮನಹರಿಸಲಾಗುವುದು ಏನದು ಹೇಳಿದರು.

ಬಳಿಕ ಮಾತನಾಡಿದ ಅವರು ನಾನು ಇನ್ನೂ ಎರಡು ದಿನ ಯಾರ ಜೊತೆಯೂ ಮಾತಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಸಂತ್ರಸ್ತೆ ಹೇಳಿದ್ದಾರೆ ಹಾಗಾಗಿ ಅವರನ್ನು ಮಾತನಾಡಿಸಲು ಹೋಗಲ್ಲ, ಬೇರೆ ಸರಕಾರಗಳು ಇದ್ದ ಸಂದರ್ಭದಲ್ಲಿಯೂ ಈ ರೀತಿಯ ಪ್ರಕರಣಗಳು ನಡೆದಿವೆ, ಆದರೆ ನಮ್ಮ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.

ಸದ್ಯ ಯುವತಿ ಚೇತರಿಸಿಕೊಳ್ಳುತ್ತಿದ್ದು ಇನ್ನು ಎರಡು ಮೂರು ದಿನಗಳ ಕಾಲ ಯುವತಿಗೆ ವಿಶ್ರಾಂತಿಯ ಅಗತ್ಯವಿರುವ ಕಾರಣ ಆ ಬಳಿಕ ಯುವತಿಯ ಹೇಳಿಕೆಯನ್ನು ಪಡೆದುಕೊಳ್ಳಲಾಗುವುದು ಎಂದಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ