Breaking News

ಅತ್ಯಾಚಾರ ಯುವತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಹೇಳಿಕೆ ಹಿಂಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

Spread the love

ಬೆಂಗಳೂರು: ಅತ್ಯಾಚಾರ ಯುವತಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಯನ್ನು ವಾಪಸ್ಸು ಪಡೆದಿರುವುದಾಗಿ ಹೇಳಿದ್ದಾರೆ. ನಗರದ ಪರಪ್ಪನ ಅಗ್ರಹಾರ ಭೇಟಿಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿಯ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿ, ನನಗೂ ಆ ಹೇಳಿಕೆ ನೀಡಿದ ಬಳಿಕ ತುಂಬಾ ನೋವಾಗಿದೆ, ಬೊಮ್ಮಾಯಿಯಯವರ ಸರ್ಕಾರ ಎಲ್ಲ ಹೆಣ್ಣು ಮಕ್ಕಳ ಪ್ರಾಣ ಮಾನ ಕಾಪಾಡುವ ಬದ್ಧತೆ ಹೊಂದಿದೆ, ಎಂದು ಹೇಳಿ ಹೇಳಿಕೆ ವಾಪಸ್ಸು ಪಡೆದಿರುವುದಾಗಿ ತಿಳಿಸಿದರು.

ಮೈಸೂರಿನಲ್ಲಿ ನಡೆದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ.. ಅತ್ಯಾಚಾರಕ್ಕೆ ಒಳಗಾಗಿರುವ ಯುವತಿ ಅಲ್ಲಿಗೆ ಹೋಗಬಾರದಿತ್ತು ಅಂತಾ ಹೇಳಿಕೆ ನೀಡಿದ್ದರು. ಈ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಒಬ್ಬ ರಾಜ್ಯದ ಗೃಹಮಂತ್ರಿಯಾಗಿ ಎಂತಹ ಹೇಳಿಕೆ ನೀಡಿದ್ದಾರೆಂದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.. ಸಚಿವರ ವಿರುದ್ದ ಪ್ರತಿಭಟನೆಗಳು ಆರಂಭವಾದ ಬೆನ್ನಲ್ಲೇ ಸಚಿವರು ಹೇಳಿಕೆ ವಾಪಸ್ಸು ಪಡಿದ್ದಾರೆ


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ