Breaking News

BJPಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ, ಅತ್ಯಾಚಾರಿಗಳ ರಕ್ಷಣೆ ಮಾಡುವಂತಿದೆ: ಕಾಂಗ್ರೆಸ್

Spread the love

ಬೆಂಗಳೂರು: ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ ಬಿಜೆಪಿ ಸರ್ಕಾರ. ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿದ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ! ಸಿದ್ದು ಸವದಿಯನ್ನ ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

ಟ್ವಿಟ್ಟರ್ ನಲ್ಲಿ ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ಟೀಕೆ ಮಾಡಿದೆ. ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ ಪ್ರಕರಣ ನಡೆದು 24 ಗಂಟೆಗೂ ಅಧಿಕ ಸಮಯ ಕಳೆದಿದ್ದರೂ ಆರೋಪಿಗಳನ್ನು ಬಂಧಿಸಲಾಗದ್ದು ಬಿಜೆಪಿ ಸರ್ಕಾರದ ಆಡಳಿತದಲ್ಲಿ ಗೃಹ ಇಲಾಖೆಯ ಕಾರ್ಯಕ್ಷಮತೆ ಕುಸಿದಿರುವುದಕ್ಕೆ ಸಾಕ್ಷಿ. ಇದುವರೆಗೂ ಗೃಹಸಚಿವರು, ಬಿಜೆಪಿಯ ಮಹಿಳಾ ನಾಯಕಿಯರು ಸಂತ್ರಸ್ತೆಯನ್ನು ಭೇಟಿಯಾಗದಿರುವುದು ಬಿಜೆಪಿಯ ನಿರ್ಲಕ್ಷ್ಯ ಧೋರಣೆಗೆ ನಿದರ್ಶನ ಎಂದಿದೆ.

 

ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಉತ್ತರ ಪ್ರದೇಶದ ಮಾದರಿಯಲ್ಲಿಯೇ ರಾಜ್ಯದಲ್ಲೂ ಅತ್ಯಾಚಾರ ಪ್ರಕರಣಗಳು ಘಟಿಸುತ್ತಿವೆ. ಬಿಜೆಪಿ ಸದಾ ಜಪಿಸುವ ‘ಯುಪಿ ಮಾಡೆಲ್’ನ್ನು ರಾಜ್ಯದಲ್ಲಿ ಈ ಮೂಲಕ ಜಾರಿಗೊಳಿಸಲು ತೀರ್ಮಾನಿಸಿದೆ. ಚಾಮುಂಡಿ ಬೆಟ್ಟದಂತಹ ಪ್ರವಾಸಿತಾಣದಲ್ಲೂ ಪೊಲೀಸ್ ರಕ್ಷಣೆ, ಗಸ್ತು ಇಲ್ಲದಿರುವುದು ಸರ್ಕಾರದ ವೈಫಲ್ಯ ಗೃಹಸಚಿವರೇ ಎಂದು ಕಾಂಗ್ರೆಸ್ ಟೀಕಿಸಿದೆ.

ಸಾಂಸ್ಕೃತಿಕ ನಗರಿ ಎನಿಸಿಕೊಂಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ಅತ್ಯಾಚಾರ ಪ್ರಕರಣವು ಬಿಜೆಪಿ ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ. ಹಿಂದೊಮ್ಮೆ ಮಾಧ್ಯಮ ವರದಿಗಾರ್ತಿಗೆ ಕೆ.ಎಸ್.ಈಶ್ವರಪ್ಪ ಅವರು ಆಡಿದ ಅಸಂಬದ್ಧ ಮಾತುಗಳೇ ಬಿಜೆಪಿಯ ಮಹಿಳಾ ವಿರೋಧಿ ಧೋರಣೆ ಹಾಗೂ ಮಹಿಳಾ ರಕ್ಷಣೆಯ ಬಗೆಗೆ ಇರುವ ಉದಾಸೀನತೆ ತೋರುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ