Breaking News

ಗೋವಾದಲ್ಲಿ ಕಾಂಗ್ರೆಸ್ ಮೈತ್ರಿ ? ಕುತೂಹಲ ಹೆಚ್ಚಿಸಿದ ಚಿದಂಬರಂ ನೇತೃತ್ವದ ಸಭೆ

Spread the love

ಪಣಜಿ : ಗೋವಾ ವಿಧಾನ ಸಭಾ ಚುನಾವಣೆಗೆ ಗೋವಾಕ್ಕೆ ಆಗಮಿಸಿರುವ ಕಾಂಗ್ರೇಸ್ ರಾಷ್ಟ್ರೀಯ ನಾಯಕ ಪಿ.ಚಿದಂಬರಂ ರವರು ಪಣಜಿಯ ಖಾಸಗಿ ಹೋಟೆಲ್‍ ವೊಂದರಲ್ಲಿ ರಾಜ್ಯ ಕಾಂಗ್ರೇಸ್ ಶಾಸಕರು, ಸಂಸದರು, ಮಾಜಿ ಶಾಸಕರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಗೋವಾದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಗೋವಾದ ಸ್ಥಳೀಯ ಪಕ್ಷಗಳೊಂದಿಗೆ ಕಾಂಗ್ರೇಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಪಿ.ಚಿದಂಬರಂ ರವರು ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಚಿದಂಬರಂ ರವರು ಖಾಸಗಿ ಹೋಟೆಲ್‍ ನಲ್ಲಿ ನಡೆಸಿದ ಸಭೆಯಲ್ಲಿ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಗೋವಾ ಪ್ರದೇಶ ಕಾಂಗ್ರೇಸ್ ಸಮೀತಿಯ ಅಧ್ಯಕ್ಷ ಗಿರೀಶ್ ಚೋಡಣಕರ್ ಸೇರಿದಂತೆ ಶಾಸಕರು, ಮಾಜಿ ಶಾಸಕರು ಪಾಲ್ಗೊಂಡಿರುವುದು ಈಗ ಗೋವಾ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್​ಡಿಕೆಗೆ ಪಾಟೀಲ್ ಪ್ರತಿಸವಾಲು

Spread the loveಗದಗ: ”ಗೋವಾದಲ್ಲಿ ನಿಮ್ಮದೇ ಮಿತ್ರಪಕ್ಷದ ಸರ್ಕಾರವಿದೆ. ಮಹದಾಯಿ ಯೋಜನೆಗೆ ಒಪ್ಪಿಗೆ ಕೊಡಿಸಿ. ಗೋವಾದ ಒಪ್ಪಿಗೆ ತೆಗೆದುಕೊಂಡು ಬನ್ನಿ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ