Breaking News

ನಾನು ಶಾಶ್ವತ ಸಿಎಂ ಆಕಾಂಕ್ಷಿ: ಉಮೇಶ್ ಕತ್ತಿ

Spread the love

ನನಗೆ ಈಗ 60 ವರ್ಷ. ಆದರೂ ನಾನು ಶಾಶ್ವಮುಖ್ಯಮಂತ್ರಿ ಆಕಾಂಕ್ಷಿ ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ, ಅವರ ನೇತೃತ್ವದಲ್ಲಿ ಸಚಿವನಾಗಿರುವುದು ಖುಷಿ ಇದೆ. ನಾನು ಕೂಡ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೆ. ಈಗಲೂ ಆಕಾಂಕ್ಷಿಯಾಗಿದ್ದೇನೆ ಎಂದರು.

ನನಗೆ ಈಗ 60 ವರ್ಷ. ಹಾಗಾಗಿ ಸಿಎಂ ಆಗಲು ಇನ್ನೂ 15 ವರ್ಷ ಸಮಯ ಇದೆ. ಮುಂದೇ ಅವಕಾಶ ಬಂದರೆ ಮುಖ್ಯಮಂತ್ರಿ ಆಗುತ್ತೇನೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ಮುಂದಿನ 2 ವರ್ಷ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿರಲಿದ್ದಾರೆ. ಮುಂದಿನ ಬಾರಿಯೂ ಸಹ ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ