Breaking News

ಮೈಸೂರು ಅತ್ಯಾಚಾರ ಪ್ರಕರಣ: ಹಿರಿಯ ಪೊಲೀಸ್‌ ಅಧಿಕಾರಿಗಳ ಜೊತೆ ಸಚಿವ ಆರಗ ಸಭೆ

Spread the love

ಮೈಸೂರು: ಸಾಮೂಹಿಕ ಅತ್ಯಾಚಾರದಂತಹ ಗಂಭೀರ ಪ್ರಕರಣ ನಡೆದಿರುವ ಹೊತ್ತಿನಲ್ಲಿ ಪೊಲೀಸ್‌ ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಮಧ್ಯಾಹ್ನದವರೆಗೂ ಯಾವುದೇ ಸಭೆ ನಡೆಸಿರಲಿಲ್ಲ. ನಂತರ ಮಧ್ಯಾಹ್ನ 1 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಆರಂಭಿಸಿದ್ದಾರೆ.

ಗುರುವಾರ ರಾತ್ರಿ ನಗರಕ್ಕೆ ಬಂದ ಸಚಿವರು, ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್‌ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಇಲ್ಲಿ ಫೈರಿಂಗ್ ಸ್ಟಿಮಿಲೇಟರ್‌ನ್ನು ಉದ್ಘಾಟಿಸಿ, ಸಾಕಷ್ಟು ಹೊತ್ತು ಫೈರಿಂಗ್‌ ನಡೆಸುವ ದೃಶ್ಯ ವೀಕ್ಷಿಸಿದರು.

ಅತ್ಯಾಚಾರ ಪ್ರಕರಣ ಹಾಗೂ ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳನ್ನು ಕುರಿತು ಅಧಿಕಾರಿಗಳೊಂದಿಗೆ ಮಧ್ಯಾಹ್ನದವರೆಗೂ ಸಭೆ ನಡೆಸಿರಲಿಲ್ಲ.

‘ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಬಗ್ಗೆ ತಮಗೆ ಸಹಮತ ಇಲ್ಲ’ ಎಂದಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯ ಪ್ರಗತಿಯನ್ನು ತಮಗೆ ನೇರವಾಗಿ ವರದಿ ಸಲ್ಲಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ