Breaking News

ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ.

Spread the love

ಘಟಪ್ರಭಾ : ಮೊನ್ನೆಯಷ್ಟೇ ಕ್ರೂರಿಗಳು ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಮಾಸುವ ಮುನ್ನವೇ ಇಂತಹದೆ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

 

ಸುಮಾರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕ್ರೂರಿ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗುತ್ತಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ ಠಾಣೆಯ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಜುಲೈ 25 ರಂದು ಈ ಹೀನ ನಡೆದಿದೆ ಎಂದು ತಿಳಿದು ಬರುತ್ತಿದೆ.

 

 

ಈ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ