Breaking News

2019 ರಿಂದ 2021 ನಡುವೆ ಕರ್ನಾಟಕದಲ್ಲಿ 1,168 ಅತ್ಯಾಚಾರ ಕೇಸ್ ದಾಖಲು..!

Spread the love

ಬೆಂಗಳೂರು,ಆ.27-ಮೈಸೂರಿನ ಚಾಮುಂಡಿ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರದ ಬೆನ್ನಲ್ಲೇ ಆತಂಕದ ಮಾಹಿತಿಯೊಂದು ಹೊರಬಿದ್ದಿದೆ. ರಾಜ್ಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ಜನವರಿಯಿಂದ ಮೇ 2021ರವರೆಗೆ ಸುಮಾರು 1, 168 ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಪ್ರತಿದಿನ ಸರಾಸರಿ ಒಂದು ಅತ್ಯಾಚಾರ ಘಟನೆ ನಡೆಯುತ್ತಿದೆ. 22 ಸಾಮೂಹಿಕ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಹೆಚ್ಚು ಭೀತಿ ಹುಟ್ಟಿಸಿವೆ.

ರಾಜ್ಯದ ಪೊಲೀಸರಿಂದ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ಮಾಹಿತಿ ಲಭ್ಯವಾಗಿದ್ದು, ಪ್ರಸಕ್ತ ಅವಧಿಯಲ್ಲಿ 18 ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ. ಈ ವರ್ಷದಿಂದ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗತೊಡಗಿವೆ.

ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣದ ನಂತರ ಇಂತಹ ಹೀನ ಕೃತ್ಯಗಳು ಮುಂದೆ ಸಂಭವಿಸದಂತೆ ಅತ್ಯಾಚಾರಿಗಳನ್ನು ಶಿಕ್ಷಿಸಲು ಹೊಸ ಕಾನೂನಿನ ನಿರೀಕ್ಷೆ ಮಾಡಲಾಗಿತ್ತು. ಆದರೆ, ಕಳೆದ ಎರಡೂ ವರ್ಷಗಳಲ್ಲಿ ಮಹಿಳೆಯರ ವಿರುದ್ಧ ಅಮಾನವೀಯ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆ ಹೆಚ್ಚಾಗತೊಡಗಿದೆ.

ಮಹಿಳೆಯರ ಸುರಕ್ಷತೆಗಾಗಿ ಮಾರ್ಗಸೂಚಿಗಳನ್ನು ರೂಪಿಸಲಾಗಿದ್ದರೂ ಇಂತಹ ಪ್ರಕರಣಗಳು ರಾಜ್ಯದ ಎಲ್ಲಾ ಕಡೆ ನಡೆಯುತ್ತಲೇ ಇದೆ. ಮಹಿಳೆಯರು ಇಂದಿಗೂ ಲೈಂಗಿಕ ಅಪರಾಧಗಳಿಗೆ ಬಲಿಪಶುಯಾಗುತ್ತಿರುವುದು ದುರದೃಷ್ಟಕರ. 2019ರಲ್ಲಿ ಹಿಂಸೆ, ಅಪಹರಣ, ವರದಕ್ಷಣೆ ಸೇರಿದಂತೆ 10,227 ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ವರದಿಯಾಗಿದ್ದವು. 2020ರಲ್ಲಿ ಈ ಪ್ರಕರಣಗಳ ಸಂಖ್ಯೆ 10, 761ಕ್ಕೆ ಏರಿಕೆಯಾಯಿತು. 2021 ಮೇ ಅಂತ್ಯದವರೆಗೂ ಮಹಿಳೆಯರ ವಿರುದ್ಧ 4,401 ಪ್ರಕರಣಗಳು ವರದಿಯಾಗಿವೆ.

ಕೊರೋನಾ ಲಾಕ್‍ಡೌನ್ ನಂತರ ಕಳವು, ಡಕಾಯಿತಿ ಪ್ರಕರಣಗಳು ಕಡಿಮೆಯಾಗಿವೆ. ಆದರೆ, ಮಹಿಳೆಯರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಗಳು ನಂತರು ನಿಂತಿಲ್ಲ. ಸಾಂಕ್ರಾಮಿಕ ಮತ್ತು ಲಾಕ್ ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 400 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ.


Spread the love

About Laxminews 24x7

Check Also

ಮೆಡಿಕಲ್ ಸೀಟು ಕೊಡಿಸುವುದಾಗಿ ಖಾಸಗಿ ಕಂಪನಿ ಉದ್ಯೋಗಿಗೆ ₹10 ಲಕ್ಷ ವಂಚನೆ ಆರೋಪ

Spread the loveದಾವಣಗೆರೆ: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ಖಾಸಗಿ ಕಂಪನಿ ಉದ್ಯೋಗಿಗೆ 10.64 ಲಕ್ಷ ರೂಪಾಯಿ ವಂಚಿಸಿರುವ ಘಟನೆ 2022ರಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ