Breaking News

ಸಿಂಪಲ್ ಸಿಎಂ: ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು,ಆ.29- ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಒಂದು ತಿಂಗಳು ಸಂದಿದೆ. ರಾಜ್ಯದ ಗದ್ದುಗೆಗೇರಿದ ಕೆಲವೇ ದಿನಗಳಲ್ಲಿ ಅವರು ಮಾಡಿದ ಕೆಲಸಗಳು ಜನಪ್ರಿಯವಾಗುವ ಜೊತೆಗೆ ಸಿಂಪಲ್ ಸಿಎಂ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

# ಬೊಮ್ಮಾಯಿ ಸಿಎಂ ಆಗಿದ್ದೇ ಅಚ್ಚರಿ:
ಸಿಎಂ ರೇಸ್‍ನಲ್ಲಿ ಹಲವಾರು ನಾಯಕರ ಹೆಸರುಗಳು ಕೇಳಿ ಬಂದಿದ್ದವು. ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣ ಅಥವಾ ಹಿಂದುಳಿದ ವರ್ಗಗಳ ಸಮುದಾಯದವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ಕೇಳಿಬಂದಿತ್ತು. ಆದರೆ, ಹೈಕಮಾಂಡ್ ಲೆಕ್ಕಾಚಾರವೇ ಬೇರೆಯಾಗಿತ್ತು. ಎರಡು ದಿನ ಚರ್ಚೆ ನಡೆಸಿದ ದೆಹಲಿ ವರಿಷ್ಠರು, ಒಂದು ಹೆಸರನ್ನು ಅಂತಿಮಗೊಳಿಸಿದರು.ದೆಹಲಿಯಿಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಿಎಂ ಯಾರೆಂಬ ಹೆಸರನ್ನು ಹೊತ್ತು ತಂದರು. ಜು.27ರಂದು ಖಾಸಗಿ ಹೋಟೆಲ್‍ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮುಂದೆ ಮುಖ್ಯಮಂತ್ರಿಯಾಗುವ ಆ ಹೆಸರನ್ನು ನಿರ್ಗಮಿತ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದರು.

ಲಿಂಗಾಯತ ಸಮುದಾಯದ ಬಿ.ಎಸ್.ಯಡಿಯೂರಪ್ಪ ಅವರ ನಿರ್ಗಮನದ ಹಿನ್ನೆಲೆಯಲ್ಲಿ ಉಂಟಾಗಬಹುದಾದ ನಷ್ಟವನ್ನು ಭರಿಸುವ ಉದ್ದೇಶದಿಂದ ಮತ್ತೆ ಲಿಂಗಾಯತರಿಗೆ ಹೈಕಮಾಂಡ್ ಮಣೆ ಹಾಕಿದೆ ಎಂಬ ಮಾತುಗಳು ಕೇಳಿಬಂದವು.

# ಸಿಂಪಲ್ ಸಿಎಂ:
ಬಸವರಾಜ ಬೊಮ್ಮಾಯಿ ರಾಜಕೀಯ ಕುಟುಂಬದಿಂದ ಬಂದವರು. ತಂದೆ, ಮಾಜಿ ಮುಖ್ಯಮಂತ್ರಿ ದಿ.ಎಸ್.ಆರ್.ಬೊಮ್ಮಾಯಿ ಗರಡಿಯಲ್ಲಿ ಪಳಗಿದವರು. ತಂದೆಯವರು ಚುನಾವಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ರಾಜಕೀಯ ಪ್ರವೇಶಿಸಿ ಹಲವಾರು ಹೋರಾಟದಲ್ಲಿ ಪಾಲ್ಗೊಂಡಿದ್ದ ಬಸವರಾಜ ಬೊಮ್ಮಾಯಿ, ತಂದೆ ಸಿಎಂ ಆಗಿದ್ದರೂ ಯಾವುದೇ ಹಮ್ಮುಬಿಮ್ಮುಗಳನ್ನು ತೋರಿಸದೆ ಸಾಮಾನ್ಯ ಕಾರ್ಯಕರ್ತನಂತೆ ಪಕ್ಷದಲ್ಲಿ ದುಡಿಯುತ್ತಾ, ಹತ್ತಾರು ಹೋರಾಟಗಳನ್ನು ಮಾಡುತ್ತಾ ರಾಜಕೀಯದಲ್ಲಿ ಹಂತ ಹಂತವಾಗಿ ಬೆಳೆದವರು.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ