ಯಮಕನಮರಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಇಂದು ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಚಾಲನೆ ನೀಡಿದರು.
ಶಾಸಕ ಸತೀಶ ಅವರು ಜಲಜೀವನ ಮಿಷನ್ ಯೋಜನೆಯಡಿ ಬಸ್ಸಾಪೂರ ಗ್ರಾಮದಲ್ಲಿ 1.12 ಕೋಟಿ ರೂ. ವೆಚ್ಚದ ಕಾಮಗಾರಿ, ಯಲ್ಲಾಪುರ ಗ್ರಾಮದಲ್ಲಿ 18.18 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಹೊನಗಾದಲ್ಲಿ 3.69 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಗುಣಮಟ್ಟದ ಕಾಮಗಾರಿ ಕೈಗೊಂಡು ಶೀಘ್ರವಾಗಿ ಮುಗಿಸಬೇಕು ಎಂದು ಗುತ್ತಿಗೆದಾರರು ಹಾಗೂ ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಪಂ ಮಾಜಿ ಸದಸ್ಯರಾದ ಮಂಜುನಾಥ ಪಾಟೀಲ್, ಸಿದ್ದು ಸುಣಗಾರ, ತಾಪಂ ಮಾಜಿ ಸದಸ್ಯ ಭಂಜಿರಾಮ, ಬಸನಾಯಕ ಕುಂದರಗಿ, ಗ್ರಾಪಂ ಸದಸ್ಯ ವಿಜಯ ವನಮನಿ ಸೇರಿ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.
Laxmi News 24×7