ಗದಗ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷದ ಆಡಳಿತ ಇಡೀ ದೇಶಕ್ಕೆ ಶಾಪವಾಗಿತ್ತು ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಜನತೆಗೆ ಶಾಪವಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷ ರಾಜ್ಯಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಶಾಪವಾಗಿತ್ತು. ಆ ಶಾಪದಿಂದ ಮುಕ್ತಿ ದೊರೆತು ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದಿದೆ. ರಾಜ್ಯದಲ್ಲಿ ಸಿಎಂ ಬೊಮ್ಮಾಯಿ ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದರು.
ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶ್ರೀರಾಮುಲು ಮಹಿಳೆಯರಿಗೆ ರಕ್ಷಣೆ ಕೊಡುವಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಕಾಂಗ್ರೆಸ್ ನವರು ಪ್ರಕರಣದ ತನಿಖೆಗಾಗಿ ಪ್ರತ್ಯೇಕ ಸಮಿತಿ ರಚಿಸಿದ್ದಾರೆ ಎಂದು ಹೇಳಿದರು.
Laxmi News 24×7