ನೆಲಮಂಗಲ: ವಿದ್ಯಾರ್ಥಿಗಳು ಹಾಗೂ ಜನರು ಕೆ.ಎಸ್.ಆರ್.ಟಿ.ಸಿ ಬಸ್‍ಗಳನ್ನು ತಡೆದು ನೆಲಮಂಗಲದಲ್ಲಿ ಪ್ರತಿಭಟನೆ ನಡೆಸಿದರು.
ಕೊರೊನಾ ಆತಂಕದ ನಡುವೆಯೇ ಇತ್ತೀಚೆಗೆ ಶಾಲಾ ಕಾಲೇಜುಗಳನ್ನು ಓಪನ್ ಮಾಡಿದ್ದು, ಪಾಠ ಪ್ರವಚನಗಳು ನಡೆಯುತ್ತಿವೆ. ಆದರೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆಯಿಂದ ಸಾಕಷ್ಟು ಕಷ್ಟ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಬೆಳಗ್ಗೆ ಸಮಯದಲ್ಲಿ ಶಾಲಾ ಕಾಲೇಜುಗಳಿಗೆ ಹೋಗಲು ಬಸ್‍ಗಳು ಸರಿಯಾಗಿ ಬರುತ್ತಿಲ್ಲ. ಬರುವಂತಹ ಎಲ್ಲಾ ಬಸ್‍ಗಳು ಸರ್ವೀಸ್ ರಸ್ತೆಯಲ್ಲಿ ಚಲಿಸದೆ ಹೆದ್ದಾರಿಯಲ್ಲಿ ಸಂಚಾರ ಮಾಡುತ್ತಿವೆ. ಈ ನಿಟ್ಟಿನಲ್ಲಿ ಸಾಕಷ್ಟು ಬಾರಿ ತುಮಕೂರು ಡಿಪೋ ಅಧಿಕಾರಿಗಳಿಗೆ ಲಿಖಿತ ಮೂಲಕ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಈಗಾಗಲೇ ಪರೀಕ್ಷೆಗಳು ಶುರುವಾಗಿದ್ದು, ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗದೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ.
Laxmi News 24×7