Breaking News

ಡಿಕೆಶಿಗೆ ಇನ್ನೂ ತಂಡ ಕಟ್ಟಿಕೊಳ್ಳೋಕೆ ಆಗ್ತಿಲ್ಲ : ಸಿ.ಟಿ.ರವಿ

Spread the love

ಕಲಬುರಗಿ : ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಿಗೆ ಇನ್ನೂ ಕೂಡ ತಂಡ ಕಟ್ಟಿಕೊಳ್ಳೋಕೆ ಆಗ್ತಿಲ್ಲ, ಪಕ್ಷದ ತಂಡವನ್ನೇ ಕಟ್ಟಿಕೊಳ್ಳೊಕ್ಕೆ ಆಗದಿರೋರು ಅಧಿಕಾರಕ್ಕೆ ಬರಲು ಹಗಲುಗನಸು ಕಾಣುವ ನೈತಿಕತೆ ಎಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಮೂರು ಮಹಾನಗರಪಾಲಿಕೆಗಳಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಸಿದ್ದರಾಮಯ್ಯ ಪ್ರಕೃತಿ ಚಿಕಿತ್ಸೆ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಚುನಾವಣೆಗಳು ಬಂದಾಗ ರೆಸ್ಟ್ ಮಾಡಲು ಹೋಗುವುದಲ್ಲದೇ ಅಲ್ಲಿಂದ ಕೆಲವು ಸಂದೇಶಗಳನ್ನು ಕೊಡುತ್ತಾರೆ.

ಕಾಂಗ್ರೆಸ್ ಗೆಲ್ಲಬಾರದು ಎಂದು ಈಗ ಸದ್ಯ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಅದರಲ್ಲೂ ಈ ಬಾರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆ ಗೆಲ್ಲಬಾರದೆಂಬ ಸಂದೇಶ ನೀಡಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ ಸಿ.ಟಿ.ರವಿ, ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಿಗೆ ಇನ್ನೂ ಕೂಡ ತಂಡ ಕಟ್ಟಿಕೊಳ್ಳೋಕೆ ಆಗ್ತಿಲ್ಲ, ಪಕ್ಷದ ತಂಡವನ್ನೇ ಕಟ್ಟಿಕೊಳ್ಳೊಕ್ಕೆ ಆಗದಿರೋರು ಅಧಿಕಾರಕ್ಕೆ ಬರಲು ಹಗಲುಗನಸು ಕಾಣುವ ನೈತಿಕತೆ ಎಲ್ಲಿದೆ ಎಂದು ಕಿಚಾಯಿಸಿದರು.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ