Breaking News

ಸೆಪ್ಟೆಂಬರ್‌ 1 ರಿಂದ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

Spread the love

ಚಾಮರಾಜನಗರ : ಜಿಲ್ಲೆಯಲ್ಲಿ ಕೊರೊನಾ ಲಸಿಕೆ ವೇಗ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದು, ವ್ಯಾಕ್ಸಿನೇಷನ್ ಪ್ರಮಾಣಪತ್ರ ತಂದ್ರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಎಂ.ಆರ್. ರವಿ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಡಾ ಎಂಆರ್ ರವಿ ಹೊಸ ಮಾರ್ಗವೊಂದನ್ನು ಕಂಡುಕೊಂಡಿದ್ದು, ಸೆಪ್ಟೆಂಬರ್‌ 1 ರಿಂದ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಜೀವರಕ್ಷಣೆಯ ಸಲುವಾಗಿ ಸೆಪ್ಟೆಂಬರ್‌ 1 ರಿಂದ ನೋ ವ್ಯಾಕ್ಸಿನೇಷನ್‌ – ನೋ ರೇಷನ್, ನೋ ವ್ಯಾಕ್ಸಿನೇಷನ್‌ – ನೋ ಪೆನ್ಷನ್‌ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ಮುಂದಾಗಿದ್ದಾರೆ. ಸಾಕಷ್ಟು ಜಾಗೃತಿ, ನಿರಂತರ ಅರಿವು ಮೂಡಿಸುತ್ತಿದ್ದರೂ ಲಸಿಕೆ ಪಡೆಯಲು ಅಸಡ್ಡೆ ತೋರುತ್ತಿರುವವರಿಗೆ ಬಿಸಿ ಮುಟ್ಟಿಸಿಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿ ರವಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಆಯುರ್ವೇದ ಕ್ಷೇತ್ರದ ಸಾಧನೆಗೆ ಡಾ. ರೂಪೇಶ್ ಸಾಳುಂಕೆ ಅವರಿಗೆ ‘ಕರ್ನಾಟಕ ಆರೋಗ್ಯ ರಕ್ಷಣಾ ವೈದ್ಯ ರತ್ನ’ ಪ್ರಶಸ್ತಿ

Spread the love25 ವರ್ಷಗಳ ಆಯುರ್ವೇದ ಸೇವೆ ಹಾಗೂ ಸಾಮಾಜಿಕ ಕಾಳಜಿಗೆ ಸಂದ ಗೌರವ ಬೆಳಗಾವಿ: ಆಯುರ್ವೇದ ಕ್ಷೇತ್ರದಲ್ಲಿ ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ