Breaking News

ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮ ಪ್ರಸ್ತಾಪ ಮಾಡಿದ ಎಂ.ಬಿ.ಪಾಟೀಲ್‌

Spread the love

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮತ್ತೆ ಪ್ರಸ್ತಾಪಿಸಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್‌, ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚಪೀಠದವರು ಎಲ್ಲರೂ ಸೇರಿ ಬಸವ ಧರ್ಮ ಆಗಬೇಕು. ಪ್ರತ್ಯೇಕ ಲಿಂಗಾಯತ ಧರ್ಮ ಆದರೆ ನಮಗೆ ಸೌಲಭ್ಯ ಸಿಗುತ್ತದೆ. ಮುಸ್ಲಿಂ, ಜೈನರ ಮಾದರಿಯಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ದೊರೆಯುತ್ತದೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಕಾರಣವಲ್ಲ ಎಂದ ಅವರು, ಇದೀಗ ಪಂಚಮಸಾಲಿ ಮೀಸಲಾತಿಗೆ ಹೋರಾಟ ಮಾಡುತ್ತಿದ್ದಾರೆ. ಪ್ರತ್ಯೇಕ ಧರ್ಮ ಆದರೆ ಅವರಿಗೂ ಮೀಸಲಾತಿ ಸಿಗುತ್ತದೆ ಎಂದು ತಿಳಿಸಿದರು.

ಈ ಮಧ್ಯೆ, ಎಂ.ಬಿ.ಪಾಟೀಲ್‌ ಅವರ ಹೇಳಿಕೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಕ್ರಿಯೆಗೆ ನಿರಾಕರಿಸಿ, ಈ ವಿಚಾರ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಖಂಡನೆ
ಚಾಮರಾಜನಗರ ಜಿಲ್ಲಾಧಿಕಾರಿ ಲಸಿಕೆ ಪಡೆಯದಿದ್ದರೆ ಪಡಿತರ ಇಲ್ಲ ಎಂದು ಆದೇಶ ಹೊರಡಿಸಿರುವುದು ಖಂಡನೀಯ. ಮೊದಲು ಸರ್ಕಾರ ಸಮರ್ಪಕ ಲಸಿಕೆ ನೀಡಲಿ.
-ಎಂ.ಬಿ.ಪಾಟೀಲ್‌


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ