Breaking News

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : ಸೆ.5 ರಂದು `ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ

Spread the love

ಬೆಂಗಳೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಿಕ್ಷಕರ ದಿನಾಚರಣೆಯ ಸೆಪ್ಟೆಂಬರ್ 5 ರಂದು ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ ಸಿಗಲಿದೆ.

 

ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡುವ ನಿಟ್ಟಿನಲ್ಲಿ ಎಸ್‌ಎಸ್‌ಎಲ್ ಸಿ ಪೂರ್ಣಗೊಳಿಸಿದ ರೈತರ ಮಕ್ಕಳಿಗೆ ವಾರ್ಷಿಕ ಶಿಷ್ಯವೇತನ ಲಭ್ಯವಾಗಲಿದೆ.

 

ಪಿಯುಸಿ, ಐಟಿಐ, ಡಿಪ್ಲೋಮಾ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 2,500 ರೂ. ಹಾಗೂ ವಿದ್ಯಾರ್ಥಿನಿಯರಿಗೆ 3000 ರೂ. ಬಿ.ಎ, ಬಿಸ್ಸಿ, ಬಿಕಾಂ ಓದುವ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ವಿದ್ಯಾರ್ಥಿನಿಯರಿಗೆ 5,500 ರೂ. ಎಲ್‌ಎಲ್ ಬಿ,ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್ ಓದು ವಿದ್ಯಾರ್ಥಿಗಳಿಗೆ 7,500 ರೂ. ವಿದ್ಯಾರ್ಥಿನಿಯರಿಗೆ 8000 ರೂ. ಮತ್ತು ಎಂಬಿಬಿಎಸ್, ಬಿಇ, ಬಿಟಿಕ್ ಓದುವವಿದ್ಯಾರ್ಥಿಗಳಿಗೆ 10 ಸಾವಿರ ರೂ. ವಿದ್ಯಾರ್ಥಿನಿಯರಿಗೆ 10,500 ರೂ. ಶಿಷ್ಯ ವೇತನ ನೀಡಲಾಗುತ್ತದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ